ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ನಿಶ್ಚಿತ ಎಂಬ ಹೇಳಿಕೆ ನೀಡಿದ್ದರು. ಸಂವಿಧಾನ ತಿದ್ದುಪಡಿಯ ಹೇಳಿಕೆ ನೀಡಿದ ಬಳಿಕ ಅನಂತ್ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈ ತಪ್ಪಿದೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ.
ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ – ಡಾ.ಕೆ. ಸುಧಾಕರ್
ರಾಯಚೂರು – ರಾಜಾ ಅಮರೇಶ್ ನಾಯಕ್
ಬೆಳಗಾವಿ – ಜಗದೀಶ್ ಶೆಟ್ಟರ್