Friday, January 16, 2026
Flats for sale
Homeದೇಶನವದೆಹಲಿ : ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್...

ನವದೆಹಲಿ : ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.

ನವದೆಹಲಿ : ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವಿವಾಹವಾದರೆ ಅಥವಾ ಅಪ್ಪನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಆಕೆಗೆ ಆಸ್ತಿಯಲ್ಲಿ ಪಾಲು ನೀಡಲೇಬೇಕೆಂದೇನೂ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅಪ್ಪನ ನಿರ್ಧಾರವೇ ಸರ್ವೋಚ್ಚವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.

ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.

“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular