Monday, March 16, 2026
Flats for sale
Homeದೇಶನವದೆಹಲಿ : ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಪ್ರಧಾನಿ ಮೋದಿ ಶುಭಾಶಯ.

ನವದೆಹಲಿ : ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಪ್ರಧಾನಿ ಮೋದಿ ಶುಭಾಶಯ.

ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಿಳಾ ದಿನಾಚರಣೆಯಂದೇ ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular