ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ದೆಹಲಿಯ ರೇಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.
ದೊಡ್ಡ ದೊಡ್ಡ ಹೋರ್ಡಿಂಗ್‌ಗಳನ್ನು ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ದೆಹಲಿಯ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ 2007ರ ಸೆಕ್ಷನ್ 3 ಹಾಗೂ ಇನ್ನು ಕೆಲ ಅಪರಾಧದಡಿ ಕೂಡಲೇ ಎಫ್‌ಐಆರ್ ದಾಖಲಿಸಲು ಸಂಬಂದಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ತಿಳಿಸಿದ್ದಾರೆ.