ಪುತ್ತೂರು ; ಮಾ.11ರ ಶನಿವಾರ ರಾತ್ರಿ 13 ವರ್ಷದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡುವ ಸಲುವಾಗಿ ಮನೆಗೆ ನುಗ್ಗಿದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಎಂಬಲ್ಲಿ ಈ ಘಟನೆ ನಡೆದಿದೆ.
ಕಡಬ ತಾಲೂಕಿನ ಕೊಯಿಲ ನಿವಾಸಿ ಹಸೈನಾರ್ (24) ಮತ್ತು ಅಬ್ಬಾಸ್ (30) ಆರೋಪಿಗಳಾಗಿದ್ದು, ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಗಳಿಬ್ಬರೂ ಕರಾಯ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಮರ ಕಡಿಯುವ ಕೆಲಸ ಮಾಡುತ್ತಿದ್ದರು. ನೀರು ಕುಡಿಯುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಆಗಾಗ ಹೋಗುತ್ತಿದ್ದರು. ಆರೋಪಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಹೋಗಿ ಪೇಪರ್ ಕೊಟ್ಟು ಸಂತ್ರಸ್ತ ಬಾಲಕಿಯನ್ನು ನಂಬರ್ ಗೆ ಕರೆ ಮಾಡುವಂತೆ ಹೇಳಿ ಜೀವ ಬೆದರಿಕೆ ಹಾಕಿದ್ದಾನೆ.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಆರೋಪಿ ಹಸೈನಾರ್ ತನ್ನ ಸಹಚರ ಅಬ್ಬಾಸ್ ನೊಂದಿಗೆ ಸಂತ್ರಸ್ತ ಬಾಲಕಿಯ ಮನೆಗೆ ಆಗಮಿಸಿ ಬಲವಂತವಾಗಿ ಮನೆಗೆ ನುಗ್ಗಿ ಬಾಲಕಿಯನ್ನು ಮನೆಯೊಳಗಿನ ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದ. ಬಾಲಕಿ ಮತ್ತು ಆಕೆಯ ತಾಯಿ ಕಿರುಚಿಕೊಂಡಿದ್ದು, ನೆರೆಹೊರೆಯವರು ಸಹಾಯಕ್ಕೆ ಧಾವಿಸಿ ಆರೋಪಿಗಳನ್ನು ಹಿಡಿದಿದ್ದಾರೆ.
ಪೊಲೀಸರು ಇಬ್ಬರನ್ನು ಬಂಧಿಸಿ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.