ಪುತ್ತೂರು : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ.
ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು.
ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ ಮನೆಯಲ್ಲಿದ್ದ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಕರೆದುಕೊಂಡು ಹೋಗಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲು ಸಿದ್ದತೆ ನಡೆಸುತ್ತಿದ್ದಾಗ ಮೃತಪಟ್ಟಿದ್ದಾರೆ.
ಗಂಡು ಮನೋಜ್ ಹಾಗೂ ಮೃತರು ಪತ್ನಿ ಪ್ರೇಮ ಪುತ್ರ ಮನೋಜ್ ಪುತ್ರಿಯರಾದ ದೇವಿಕಾ ಮತ್ತು ಮಾಳವಿಕ ಎಂಬವರನ್ನು ಅಗಲಿದ್ದಾರೆ. ಮೃತರ ಪುತ್ರ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.