Saturday, March 14, 2026
Flats for sale
Homeಜಿಲ್ಲೆಪುತ್ತೂರು : ಪುತ್ತೂರು ಪೋಲೀಸರ ಕಾರ್ಯಾಚರಣೆ : ಅಶೋಕ್‌ ಲೈಲ್ಯಾಂಡ್‌ ವಾಹನ ಮತ್ತು ಕಾರಿನಲ್ಲಿ ಸಾಗಾಟ...

ಪುತ್ತೂರು : ಪುತ್ತೂರು ಪೋಲೀಸರ ಕಾರ್ಯಾಚರಣೆ : ಅಶೋಕ್‌ ಲೈಲ್ಯಾಂಡ್‌ ವಾಹನ ಮತ್ತು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 106 ಕಿಲೋ ಗ್ರಾಂ ಗಾಂಜಾ ವಶ.

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಖಚಿತ ಮಾಹಿತಿ ಮೇರೆಗೆ ಕಾರು ಮತ್ತು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂದು ತಿಳಿದುಬಂದಿದೆ.

ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಿದ್ದು ಚಾಹಲ್ಕನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿದೆ.ಸುಮಾರು 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದ್ದು ಇದರ ಮೌಲ್ಯ ರೂ.53,03,000/- ವಾಗಿರಬಹುದೆಂದು ಅಂದಾಜಿಸಲಾಗಿದೆ.ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದು ಆರೋಪಿಗಳಿಂದ ಸಾಗಾಣಿಕೆಗೆ ಬಳಸಿದ ವಾಹನಗ ಹಾಗೂ ಎರಡು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:09/2026, ಕಲಂ: 8(c), 20(b)(ii)C NDPS Act-1985. ರಂತೆ ಪ್ರಕರಣ ದಾಖಲಾಗಿದೆ.

ಈ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ಹಾಗೂ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ,ವಿನೋದ್ ರವರುಒಳಗೊಂಡ ತಂಡ ಕಾರ್ಯನಿರ್ವಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular