Sunday, March 8, 2026
Flats for sale
Homeಜಿಲ್ಲೆಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಪುತ್ತಿಲ ಪರಿವಾರದಿಂದ ಭಕ್ತಿ ಪ್ರದಾನದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವ...

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಪುತ್ತಿಲ ಪರಿವಾರದಿಂದ ಭಕ್ತಿ ಪ್ರದಾನದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ.

ಪುತ್ತೂರು : ಲೋಕ ಕಲ್ಯಾಣಾರ್ಥವಾಗಿ ಶೂರರಾಜ ಪೌತ್ರನಾದ ವಸುದೇವನ ಪುತ್ರನಾದ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀ ಶ್ರೀನಿವಾಸ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಶ್ರೀ ಪದ್ಮಾವತಿಯ ಕಲ್ಯಾಣೊತ್ಸವ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿAದ ಮತ್ತು ಭಕ್ತಿ ಪ್ರದಾನದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಭವ್ಯವಾದ ವೇದಿಕೆಯಲ್ಲಿ ನಿರ್ಮಿಸಿದ ಆಯೋಧ್ಯಾ ಮಂಟಪದಲ್ಲಿ ನಡೆಯಿತು.

ರಾತ್ರಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಕಲ್ಯಾಣೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಅವರಿಗೆ ಪುತ್ತಿಲ ಪರಿವಾರದಿಂದ ಪುಷ್ಪವೃಷ್ಟಿ ಅರ್ಪಣೆ ಮಾಡಲಾಯಿತು.

ತಿರುಪತಿ ಶ್ರೀಕ್ಷೇತ್ರ ಮೂಲದ ಬೆಂಗಳೂರಿನ ಲಕ್ಷಿö್ಮÃಪತಿ ಶರ್ಮ ಅವರ ನೇತೃತ್ವದಲ್ಲಿ ಮತ್ತು ಸುಮಾರು ೨೭ ಮಂದಿ ಆಗಮಿಕರು ಕಲ್ಯಾಣೋತ್ಸವವನ್ನು ನಡೆಸಿಕೊಟ್ಟರು. ಬೆಳಿಗ್ಗೆ ೬.೩೦ ಕ್ಕೆ ಸುಪ್ರಭಾತ ಪೂಜೆಯಿಂದ ಕಾರ್ಯಕ್ರಮ ಪ್ರಾರಂಭವಾಯಿತು.

ಮಧ್ಯಾಹ್ನ ಪದ್ಮಾವತಿ ಮಹಾಲಕ್ಷಿ÷್ಮÃ ಸಹಿತ ಶ್ರೀನಿವಾಸ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು. ಸಂಜೆ ಶ್ರೀನಿವಾಸ ದೇವರ ಕಲ್ಯಾಣೋತ್ಸವದ ಕುರಿತು ತಿರುಪತಿಯ ಅರ್ಚಕರು ಪ್ರವಚನ ನೀಡಿದರು. ಅದಾದ ಬಳಿಕ ಸಂಕಲ್ಪ ಪುಣ್ಯಾಹ, ದೇವನಾಂದಿ, ವರಪೂಜೆ, ವರೋಪಚಾರ ಸಹಿತ ಕಂಕಣಧಾರಣೆ ನಡೆಯಿತು.

ಶುಭಗಳಿಗೆಯಲ್ಲಿ ಸಹಸ್ರಾರು ಭಕ್ತರ ಗೋವಿಂದನ ಉದ್ಘೋಷದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಮಹಾಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು. ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನಪ್ರಸಾದ ವಿತರಣೆ ನಡೆಯಿತು.

ಶ್ರೀನಿವಾಸನ ಆಶೀರ್ವಾದ ಪಡೆಯಲು ಸರಥಿ ಸಾಲು:
ಶ್ರೀನಿವಾಸ ದೇವರ ಅಶೀರ್ವಾದ ಪಡೆಯಲು ಮಧ್ಯಾಹ್ನ ಸರಥಿ ಸಾಲಿನಲ್ಲಿ ಭಕ್ತರು ವೇದಿಕೆಗೆ ಬಂದು ಶ್ರೀನಿವಾಸ ದೇವರ ದರುಶನ ಪಡೆದು ಅರ್ಚಕರಿಂದ ತಿರುಪತಿ ತಿಮ್ಮಪ್ಪನ ಕಿರೀಟ ಆಶೀರ್ವಾದ ಪಡೆದರು.

ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ, ಕಾರ್ಯದರ್ಶಿ ಗಣೇಶ್‌ಚಂದ್ರ ಭಟ್ ಮಕರಂದ ಸಹಿತ ಹಲವಾರು ಮಂದಿ ವೇದಿಕೆಯಲ್ಲಿ ಭಕ್ತರಿಗೆ ಸಾವಕಾಶವಾಗಿ ದೇವರ ದರುಶನ ಪಡೆಯುವಂತೆ ವಿನಂತಿಸಿದರು.

ಶ್ರೀನಿವಾಸ ಕಲ್ಯಾಣೋತ್ಸವ ವೇದಿಕೆಯ ರಥಬೀದಿಯ ಪಕ್ಕದಲ್ಲಿ ವಿಶಾಲವಾದ ಪೆಂಡಾಲ್‌ನಲ್ಲಿ ಅನ್ನಪ್ರಸಾದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನ್ನಪ್ರಸಾದಕ್ಕೆ ಸರಥಿ ಸಾಲಿನಲ್ಲಿ ಬಂದ ಭಕ್ತರಿಗೆ ನಾಲ್ಕು ಕೌಂಟರ್‌ನಲ್ಲಿ ಅನ್ನಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಪೆಂಡಾಲ್ ಸುತ್ತ ಕುಳಿತು ಕೊಳ್ಳಲು ಚಯರ್ ವ್ಯವಸ್ಥೆ ಮಾಡಲಾಗಿತ್ತು. ಸಣ್ಣ ಮಕ್ಕಳೊಂದಿಗೆ ಬಂದ ತಾಯಂದಿರು, ವಯಸ್ಕರು ಕಲ್ಯಾಣೋತ್ಸವದ ಕಾರ್ಯಕರ್ತರು ನೇರವಾಗಿ ಅನ್ನಪ್ರಸಾದ ಕೌಂಟರ್‌ಗೆ ಕರೆದೊಯ್ದು ಅವರಿಗೆ ಸಾವಕಾಶವಾಗಿ ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಮಧ್ಯಾಹ್ನ ಜರಗಿದ ಅನ್ನಸಂತರ್ಪಣೆಯಲ್ಲಿ ಹದಿನೈದು ಸಾವಿರ ಭಕ್ತಾದಿಗಳು ಅನ್ನದಾನ ಸ್ವೀಕರಿಸಿದರು. ರಾತ್ರಿ ೫೦ಸಾವಿರ ಮಂದಿಗೆ ಅನ್ನಪ್ರಸಾದ ವಿತರಣೆ ನಡೆಯಿತು. ಅಡುಗೆ ತಯಾರಿಗೆ ಸ್ವಯಂ ಸೇವಕರು ರಾತ್ರಿ ಹಗಲು ತರಕಾರಿ ಹಚ್ಚಿದರು.

ಭಜನೆ, ಕುಣಿತ ಭಜನೆ ವಿಶೇಷ:
ಬೆಳಿಗ್ಗೆ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಎದುರಿನ ವೇದಿಕೆಯಲ್ಲಿ ಮಂಗಳೂರಿನ ರಾಗ ಲಾಸ್ಯ ತಂಡದಿAದ ಭಜನಾ ಸಂಕೀರ್ತನೆ ಕಾರ್ಯಕ್ರಮ, ಇದರ ಜೊತೆಗೆ ಜಿಲ್ಲೆಯ ಪ್ರತಿಷ್ಠಿತ ಭಜನಾ ತಂಡಗಳಿAದ ಸಭಾಂಗಣದಲ್ಲಿ ಆಕರ್ಷಕ ಕುಣಿತ ಭಜನೆ ನಡೆಯಿತು. ಸಂಜೆ ಗುರುಪ್ರಿಯ ನಾಯಕ್ ಬಳಗದಿಂದ ಭಕ್ತಿ ರಸಮಂಜರಿ ಬಳಿಕ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಅಶೀರ್ವಚನ ನೀಡಿದರು.

ಪೇಜಾವರ ಶ್ರೀಗಳಿಗೆ ಪುಷ್ಪವೃಷ್ಟಿ
ಉಡುಪಿ ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ರಾತ್ರಿ ಆಗಮಿಸಿದರು. ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಮಾಂಗಲ್ಯ ಧಾರಣೆ ಸಹಿತ ಎಲ್ಲಾ ಕಾರ್ಯಕ್ರಮ ವೀಕ್ಷಣೆ ಮಾಡಿ ಬಳಿಕ ಆಶೀರ್ವಚನ ನೀಡಿದರು. ಈ ಸಂದರ್ಭ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ಶ್ರೀಗಳ ಷಷ್ಠö್ಯಬ್ದಾಚಾರಣೆಯ ಹಿನ್ನೆಲೆಯಲ್ಲಿ ಅವರಿಗೆ ಪುಷ್ಪವೃಷ್ಟಿ ಸಮರ್ಪಿಸಲಾಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಶಾಂಕ್ ಕೊಟೇಚಾ, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಸನ್ನ ಕುಮಾರ್ ಮಾರ್ತ ಸಹಿತ ವೇದಿಕೆಯಲ್ಲಿದ್ದ ಸೇವಾರ್ಥಿಗಳು ಪುಷ್ಪವೃಷ್ಟಿ ಮಾಡಿದರು.

ಡಿ.೨೫ಕ್ಕೆ ವೈಷ್ಣವ, ಮಧ್ವಾ ಪಾರಂಪರೆಯಿAದ ಪ್ರಾತಃ ಕಾಲದ ಸುಪ್ರಭಾತ ಸೇವೆ ನಡೆಯಿತು. ಬಳಿಕ ಪುಷ್ಪಮಾಲಿಕೆ ತೋಮಾಲೆ ಸೇವೆ, ತುಪ್ಪ, ಹಾಲು ಮೊಸರು ಸೇರಿದಂತೆ ವಿಶೇಷ ದ್ರವ್ಯ ಅಭಿಷೇಕ, ಮಂಗಳದ್ರವ್ಯ ಅಭಿಷೇಕವಾಗಿ ತಿರುಮಜ್ಜನಾಭಿಷೇಕ. ಹೋಮ ಕೈಂಕಾರ್ಯ, ಮಧ್ಯಾಹ್ನ ೧೨ ಗಂಟೆಗೆ ಹೋಮದ ಪೂರ್ಣಾಹುತಿ, ಇದೇ ಸಂದರ್ಭ ಶ್ರೀನಿವಾಸ ದೇವರ ಪಾದ ತೊಳೆದ ತೀರ್ಥ ವಿತರಣೆ, ಆ ಬಳಿಕ ಸಂಜೆಯ ತನಕ ದರ್ಬಾರ್ ಅಲಂಕಾರ ನಡೆಯಿತು. ಶ್ರೀನಿವಾಸನ ಸಣ್ಣ ವಿಗ್ರಹದೊಂದಿಗೆ ಕಾಶಿಯಾತ್ರೆ, ಇದರಲ್ಲಿ ಕೋಲಾಟ ನಡೆಯಿತು. ಕಾಶಿಯಾತ್ರೆಯಲ್ಲಿ ಗರುಡಾರೂಢನಾಗಿ ಬಂದು ಮರಳಿ ಕಲ್ಯಾಣೋತ್ಸವಕ್ಕೆ ಕರೆ ತಂದು ಲಗ್ನಪತ್ರಿಕೆ ಕಾರ್ಯಕ್ರಮ ನಡೆಯಿತು.

ಇದೇ ಸಂದರ್ಭ ವಧುನಿರೀಕ್ಷಣೆ(ಮಂಗಳಮುಹೂರ್ತ), ಬಳಿಕ ಕನ್ಯಾದಾನ, ಕಂಕಣಕ್ಕೆ ನಾಗನ ಆಹವಾನೆ, ಮಾಂಗಲ್ಯ ಪೂಜೆ, ಮಾಂಗಲ್ಯ ಧಾರಣೆ, ರಾಜಾ ಹೋಮ, ಅಕ್ಷತಾರೋಹಣ ಸೇವೆ, ನಾದೋಪನಾ ಸೇವೆ, ಶೃಂಗಾರ ಕೀರ್ತನೆಗಳಲ್ಲಿ ಲೀನಾ ವಿನೋದ, ಮಾಲಿಕಾ ರೂಪಣಾ, ಮಾಲಾಧಾರಣೆ ಸೇವೆ, ಉಡುಗೊರೆ ಸೇವೆ, ಮೂರು ಬಾರಿ ನರ್ತನ, ಬೋಗ ಮೂರ್ತಿ ಊಂಜಲ್ ಸೇವೆ, ಅಷ್ಟಾವಧಾನ ಸೇವೆ ನಡೆದು, ಕೊನೆಗೆ ಸ್ವಾಮಿ ಪಾದ ತೊಳೆದ ಜಲ, ಅಕ್ಷತೆ ಮತ್ತು ತಿರುಮಲ ದೇವಸ್ಥಾನದ ಲಡ್ಡು ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular