Friday, March 28, 2025
Flats for sale
Homeಜಿಲ್ಲೆಪುತ್ತೂರು ; ಸಾವಿರಾರು ಕಾರ್ಯಕರ್ತರ ಶಕ್ತಿ ಪ್ರದರ್ಶನದೊಂದಿಗೆ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ.

ಪುತ್ತೂರು ; ಸಾವಿರಾರು ಕಾರ್ಯಕರ್ತರ ಶಕ್ತಿ ಪ್ರದರ್ಶನದೊಂದಿಗೆ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ.

ಪುತ್ತೂರು ; ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಸಾವಿರಾರು ಹಿಂದೂ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಪುತ್ತೂರು ಕ್ಷೇತ್ರದಲ್ಲಿ ಹಿಂದೂ ಶಕ್ತಿ ಪ್ರದರ್ಶನದೊಂದಿಗೆ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ.

ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಸಾವಿರಾರು ಹಿಂದೂ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಪುತ್ತೂರು (Puttur) ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದೆ. ಸಾಂಪ್ರದಾಯಿಕವಾಗಿ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಗೆಲುವಿಗಾಗಿ ಹೋರಾಟ ನಡೆಯುತ್ತಿತ್ತು. ಆದರೆ ಈ ಬಾರಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puttila) ಅವರು ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಧುಮುಕಿದ್ದಾರೆ. ಇಂದು ಅವರು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಸಿದ್ಧಾಂತವನ್ನು ಬಿಟ್ಟು ಹೋದವರಿಗೆ ಒಳ್ಳೆಯ ಸಂದೇಶ ಕೊಡಲು ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಪುತ್ತೂರು ಮಿನಿ ವಿಧಾನಸೌಧದ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಮಾತನಾಡಿದ ಅರುಣ್ ಪುತ್ತಿಲ, ಹಿಂದುತ್ವದ ಆಧಾರದಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಸಿದ್ಧಾಂತವನ್ನು ಬಿಟ್ಟು ಹೋದವರಿಗೆ ಒಳ್ಳೆಯ ಸಂದೇಶ ಕೊಡಲು ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಿರೀಕ್ಷೆಗೂ ಮೀರಿದ ಜನಬೆಂಬಲ ದೊರೆತಿದೆ. ಈ ಬಾರಿ ಪುತ್ತೂರಿನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ನಮ್ಮ ಮುಂದಿರುವ ವಿರೋಧ ಪಕ್ಷ ಯಾರೆನ್ನುವುದು ಜನತೆಗೆ ತಿಳಿದಿದೆ. ಪುತ್ತೂರಿನ ಜನತೆ ಈ ಬಾರಿ ತಮ್ಮ ಶಾಸಕ ಯಾರು ಅನ್ನೋದನ್ನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಮಹಾಲಿಂಗೇಶ್ವರನ ದಯೆಯಿಂದ ಶಾಸಕನಾಗಿ ಆಯ್ಕೆಯಾಗುವ ಭರವಸೆಯಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular