ಬಂಟ್ವಾಳ : ಇಲ್ಲಿನ ಪುಂಚಮೆ ಎಂಬಲ್ಲಿ ಮಂಗಳವಾರ ಸಂಜೆ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಸ್ಕೂಟರ್ ಚಾಲಕ ಬಾಲಕೃಷ್ಣ ಶೆಟ್ಟಿ ಕೋಡಿಬೆಟ್ಟು. ಲಾರಿ ಕೆಂಪು ಕಲ್ಲು ಸಾಗಿಸುತ್ತಿತ್ತು. ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಗಾಯಗೊಂಡ ಸವಾರ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


