Saturday, March 14, 2026
Flats for sale
Homeದೇಶಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ; ಕಾರು ಮರಕ್ಕೆ ಡಿಕ್ಕಿ ಹೊಡೆದು ಬಳ್ಳಾರಿ...

ಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ; ಕಾರು ಮರಕ್ಕೆ ಡಿಕ್ಕಿ ಹೊಡೆದು ಬಳ್ಳಾರಿ ಮೂಲದ ಐವರ ದುರ್ಮರಣ.

ಬಳ್ಳಾರಿ: ತೆಲಂಗಾಣದ ವನಪರ್ತಿ ಜಿಲ್ಲೆಯ ಕೊತ್ತಕೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಮೂಲದ ಐವರು ದುರ್ಮರಣ ಹೊಂದಿರುವಂ ಘಟನೆ ಆಂಧ್ರದ ಮೆಹಬೂಬನಗರ ಜಿಲ್ಲೆ ಕೊತಕೋಟ ಬೈಪಾಸ್‌ನಲ್ಲಿ ನಡೆದಿದೆ.

ಮೃತರನ್ನು ಬಳ್ಳಾರಿ ಮೂಲದ ಬಸವನಕುಂಟೆಯ ನಿವಾಸಿಗಳಾದ ಫಾತೀಮಾ(50), ಅಬ್ದುಲ್ ರೆಹಮಾನ್(30), ಮಾರಿಯಾ(32), ವಾಸೀಂ(01), ಬುಸ್ರಾ(02) ಎಂದು ತಿಳಿದುಬಂದಿದೆ.ಮತ್ತಿಬ್ಬರ ಸ್ಥಿತಿ ಚಿಂತಾಜನಕ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು ಜೊತೆಯಲ್ಲಿದ್ದ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಎರ್ಟಿಗಾ ಕಾರಿನಲ್ಲಿ ಹೈದರಾಬಾದ್​ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಆಂಧ್ರಪ್ರದೇಶ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular