ಬೀದರ್ : ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಸಂಭವಿಸಿದ್ದು ಇಬ್ಬರು ಯುವಕರು ಓರ್ವ ಬಾಲಕನ ಸ್ಥಿತಿ ಚಿಂತಾಜನಕವಾದ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಬ್ಲಾಸ್ಟಾದಾಗ ಪಕ್ಕದಲ್ಲೇ ನಿಂತ್ತಿದ್ದ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ಗಂಭೀರ ಗಾಯಗೊಂಡಿದ್ದಾರೆ.ಸ್ಪೋಟದ ತೀವ್ರತೆಗೆ ಯುವಕರು ಸೇರಿದಂತೆ ಮೂವರಿಗೆ ಸುಟ್ಟ ಗಾಯಗಳಾಗಿದ್ದು ಸ್ಥಿತಿ ಗಂಭೀರವಾಗಿದೆ. ಬಹುತೇಕ ಮುಖ, ಮೈ,ಕೈ ಸುಟ್ಟಿದ್ದು ಯುವಕರು ಸಾವು – ಬದುಕಿನ ಮದ್ಯ ಹೋರಾಡುತ್ತಿದ್ದಾರೆ.ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಗೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮೂವರು ಮಕ್ಕಳಿಗೆ ಬ್ರೀಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯಾಧಿಕಾರಿಗಳಿಂದ ತುರ್ತು ಚಿಕಿತ್ಸೆ ನೀಡುತ್ತಿದ್ದು ಗಾಯಗೊಂಡವರ ಕುಟುಂಬಸ್ಥರಬ ಆಕ್ರಂಧನ ಮುಗಿಲು ಮುಟ್ಟಿದೆ. ಹುಮ್ನಾಬಾದ್, ಬೀದರ್ ಪೊಲೀಸರ ಬ್ರೀಮ್ಸ್ ಆಸ್ಪತ್ರೆಗೆ ದೌಡಹಿಸಿದ್ದು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


