ಬೆಂಗಳೂರು : ರಾಜ್ಯ ಸರ್ಕಾರ ಮಂಗಳವಾರ ರಾತ್ರಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿದ್ದು, ಗುಪ್ತಚರ ವಿಭಾಗಕ್ಕೆ ಹೊಸ ಮುಖ್ಯಸ್ಥರನ್ನು ನೇಮಕ ಮಾಡಿದೆ. ಲಾಬೂ ರಾಮ್ ಅವರನ್ನು ಗುಪ್ತಚರ ವಿಭಾಗದ ಇನ್ಸ್ಪೆಕ್ಟರ್ ಜನರಲ್ (IG) ಆಗಿ ನೇಮಕ ಗಿರೀಶ್ ಅವರನ್ನು ಕೇಂದ್ರ ವ್ಯಾಪ್ತಿಯ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ (DIG) ಆಗಿ ವರ್ಗಾವಣೆ ರವಿ ಅವರನ್ನು ರಾಜ್ಯ ಮೀಸಲು ಪೊಲೀಸ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿ ನೇಮಕ ಮಾಡಲಾಗಿದೆ.
ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸಲು ಹಾಗೂ ಆಡಳಿತ ಬಲಪಡಿಸಲು ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಗಳ ಪುನರ್ವ್ಯವಸ್ಥೆ ಮೂಲಕ ಕಾರ್ಯಕ್ಷಮತೆ ಹೆಚ್ಚಿಸಲು ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ.


