ಬೆಂಗಳೂರು : ಕಬ್ಬು ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಪ್ರತಿ ಕೆಜಿ ಸಕ್ಕರೆಗೆ 41 ರೂಪಾಯಿಗೆ ದರ ಹೆಚ್ಚಿಸುವಂತೆ ದೆಹಲಿಗೆ ತೆರಳಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಬೇಡಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂ. 40ರೂ.ಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದರಿಂದ ಸಕ್ಕರೆ ಕಾರ್ಖಾನೆಗೆಳು ಖುಷ್ ಆಗಿದ್ದು, ಸಕ್ಕರೆ ಬೆಲೆ 47ರಿಂದ 48 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ. ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಪ್ರಕಾರ ದರ ಹೆಚ್ಚಳವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಈ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಗಮನಸೆಳೆದರು.
ಅಕ್ಟೋಬರ್‌ನಿಂದ ಪ್ರಾರಂಭವಾಗುವ 2025-26 ಮಾರುಕಟ್ಟೆ ವರ್ಷಕ್ಕೆ ಕೇಂದ್ರವು 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಅವಕಾಶ ನೀಡಿದೆ ಮತ್ತು ಸಿಹಿಕಾರಕದ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಬೇಕೆಂಬ ಉದ್ಯಮದ ಬೇಡಿಕೆಯನ್ನು ಪರಿಶೀಲಿಸುವುದಾಗಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಹೇಳಿದ್ದಾರೆ.


