Saturday, July 25, 2026
Homeರಾಜ್ಯಬೆಂಗಳೂರು : ಕಾಡಾನೆ ದಾಳಿಗೆ ಇಬ್ಬರು ಮಹಿಳೆಯರು, ಮೂರು ಹಸು ದಾರುಣ ಸಾವು.

ಬೆಂಗಳೂರು : ಕಾಡಾನೆ ದಾಳಿಗೆ ಇಬ್ಬರು ಮಹಿಳೆಯರು, ಮೂರು ಹಸು ದಾರುಣ ಸಾವು.

ಬೆಂಗಳೂರು : ಮಾನವ ಮತ್ತು ವನ್ಯಜೀವಿ ನಡುವಿನ ಸಂಘರ್ಷ ದಿನೇದಿನೇ ಹೆಚ್ಚುತ್ತಿದ್ದು ಆತಂಕಕಾರಿಯಾಗಿ ಮುಂದುವರಿದಿದೆ.ಒಂಟಿ ಸಲಗವೊಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಹಸುಗಳನ್ನ ಬಲಿ ಪಡೆದು ದಾಂಧಲೆ ನಡೆಸಿದ ಘಟನೆ ವರದಿಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನ ಬಲಿ ಪಡೆದ ದಾರುಣ ಘಟನೆ ಆನೇಕಲ್ ಗೆ ಹೊಂದಿಕೊಂಡಿರುವ ತಮಿಳುನಾಡಿನ ಅಣ್ಣಿಯಾಳ ಗ್ರಾಮದಲ್ಲಿ ನಡೆದಿದೆ. ಅಣ್ಣಿಯಾಳ ಗ್ರಾಮದ ಆಶಾ ಕಾರ್ಯಕರ್ತೆ ವಸಂತ(37), ದಾಸರಪಲ್ಲಿ ವಾಸಿ ಅಶ್ವಥಮ್ಮ(40) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿಗಳು.

ಕಾಡಂಚಿನ ಗ್ರಾಮಗಳಲ್ಲಿ ಆನೆ ಹಾಗೂ ಮಾನವ ಸಂಘರ್ಷ ಮಿತಿಮೀರಿದ್ದು,ಕೃಷಿ ಚಟುವಟಿಕೆಗಳಿಗೆ ಹಾವಳಿ ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,ಮೃತ ಮಹಿಳೆಯರ ಸಾವಿಗೆ ತಲಾ 20 ಲಕ್ಷ ಪರಿಹಾರದ ಜೊತೆಗೆ ಮೃತರ ಕುಟುಂಬದವರಿಗೆ ಸರ್ಕಾರಿ ಉದ್ಯೋಗಕ್ಕೆ ಒತ್ತಾಯಿಸಿ ರಸ್ತೆ ತಡೆಮಾಡಿ ಪ್ರತಿಭಟನೆ ನಡೆಸಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಕಾಡಾನೆಗಳು ನಾಡಿನತ್ತ ಬರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular