ಬೆಂಗಳೂರು : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಹಾಸನದ ಲೈಂಗಿಕ ದೌರ್ಜನ್ಯ,ಪೆನ್ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ವಿಶೇಷ ತನಿಐಟಿ) ತಯಾರಿ ನಡೆಸಿದೆ.
ಲೈಂಗಿಕ ದೌರ್ಜನ್ಯದ ಜೊತೆಗೆಖಾ ತಂಡ(ಎಸ್ ಅತ್ಯಾಚಾರ ಸೇರಿ ಮೂರು ಪ್ರಕರಣಗಳು ದಾಖಲಾಗಿರುವ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಕರೆತರಲು ಸಿದ್ಧತೆ ನಡೆಸಿದ್ದಾರೆ.
ಜರ್ಮನಿಯ ಪ್ರವಾಸದಲ್ಲಿರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಈಗಾಗಲೇ ತಿಳಿಸಿದ್ದು,ಇಲ್ಲಿಯವರೆಗೆ ಮೂರು ಪ್ರಮುಖ ಪ್ರಕರಣ ದಾಖಲಾಗಿರುವುದರಿಂದ ಬಂಧಿಸುವುದು ಎಸ್ ಐಟಿ ಅಧಿಕಾರಿಗಳಿಗೆ ಅನಿವಾರ್ಯವಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್‌ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೊಸದಾಗಿ ಐಪಿಸಿ ಸೆಕ್ಷನ್ ೩೭೬ ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತೆಯ ಮಾಹಿತಿಯನ್ನು ಗೌಪ್ಯವಾಗಿರಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್ ಪಾಯಿಂಟ್ ಇಟ್ಟು ಜೆಡಿಎಸ್ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನಲ್ಲಿ ಜೆಡಿಎಸ್ ನಾಯಕಿ, ಸಂತ್ರಸ್ತೆ ಹೇಳಿದ್ದೇನು? ಪ್ರಜ್ಲಲ್ ರೇವಣ್ಣ ಏನೆಲ್ಲಾ ಮಾಡಿದ್ದ ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದೂರು ದಾಖಲಾಗಿದೆ.ಈ ದೂರಿನಲ್ಲಿ ಬಿಗಿಯಾದ ಸೆಕ್ಷನ್‌ಗಳನ್ನು ದಾಖಲಿಸಲಾಗಿದ್ದು, ಇದರಡಿ ಪ್ರಜ್ವಲ್ ಅವರ ಬಂಧನ ಖಚಿತವಾಗಿದೆ.
ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಎಫ್‌ಐಆರ್ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದೆ. ಎರಡನೇ ಎಫ್‌ಐಆರ್‌ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು ಹೆಚ್ಚು ಬಿಗಿಯಾಗಿದ್ದು, ತನಿಖೆಗೆ ಹಾಸನ ಸಂಸದರ ಬಂಧನವನ್ನು ಅನಿವಾರ್ಯವಾಗಿಸಿವೆ.ಐಪಿಸಿ 376(2) N 506 ,354 A1, 354 B, 354 c ಸೆಕ್ಷನ್‌ಗಳು ಹಾಗೂ ಐಟಿ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಲಾಗಿವೆ.
ಹತ್ತು ವರ್ಷ ಜೈಲು : 376(2)ಎನ್ ಸೆಕ್ಷನ್ ಮಹಿಳೆ ಮೇಲೆ ಬೆದರಿಸಿ ನಿರಂತರ ಅತ್ಯಾಚಾರ ನಡೆಸುವುದನ್ನು ದಾಖಲಿಸುತ್ತಿದ್ದು, ಇದು ಸಾಬೀತಾದರೆ ಕನಿಷ್ಠ ಹತ್ತು ವರ್ಷ ಜೈಲು ಅಥವಾ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ. ಸೆಕ್ಷನ್ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು, 354A1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು- ಇದಕ್ಕೆ ಗರಿಷ್ಠ ಮೂರು ವರ್ಷಗಳ ಶಿಕ್ಷೆ, 354B ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು- ಗರಿಷ್ಠ ಮೂರು ವರ್ಷ ಶಿಕ್ಷೆ, ೩೫೪ಬಿ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಖಾಸಗಿ ವಿಷಯವನ್ನು ರೆಕಾರ್ಡ್ ಮಾಡುವುದು ಮತ್ತು ನೋಡುವುದು- ಗರಿಷ್ಠ ಏಳು ವರ್ಷ ಶಿಕ್ಷೆ ಇವುಗಳಿವೆ.