Friday, July 24, 2026
Homeರಾಜ್ಯಬೆಂಗಳೂರು : ಕಾಲೇಜು ಕಿರುಕುಳಕ್ಕೆ ಬೇಸತ್ತು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು !

ಬೆಂಗಳೂರು : ಕಾಲೇಜು ಕಿರುಕುಳಕ್ಕೆ ಬೇಸತ್ತು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು !

ಬೆಂಗಳೂರು : ರಾಜ್ಯದಲ್ಲಿ ಮನುಷ್ಯನ ಜೀವಕ್ಕೆ ಬೆಲೆಯಿಲ್ಲದಂತಾಗಿದೆ, ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದ ಯುವತಿ ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಮಹಿಳೆಯರ ಪ್ರಾಣಕ್ಕೆ ಬೆಲೆಯಿಲ್ಲದಂತಾಗಿದೆ. ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದು ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ್ದು ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ನೇಹಾ ಹಿರೇಮಠ ಅಂಜಲಿ ಅಂಬಿಗೇರ,ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ,ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪ್ರಬುದ್ಧ,ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ ಕೊಲೆ ಪ್ರಕರಣಗಳು ಚರ್ಚೆ ಹುಟ್ಟು ಹಾಕಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular