ಬೆಂಗಳೂರು : ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ ಎಂದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಕೊವಿಡ್ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೊವಿಡ್ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.ಕೋವಿಡ್-19 ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ನ್ಯಾ.ಕುನ್ಹಾ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಸಮಿತಿಯ ವರದಿ ಆಧಾರದ ಮೇಲೆ ಸರ್ಕಾರ ಕಾನೂನು ಕ್ರಮಕ್ಕೆ ಪ್ರಕ್ರಿಯೆ ಆರಂಭಿಸಿದೆ ಎಂದು ಮಂಗಳವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದ್ದರು. ಒಟ್ಟಿನಲ್ಲಿ ಮೂಡ ಹಗರಣಕ್ಕೆ ಪರಿಯಾಗಿ ಸಿದ್ದರಾಮಯ್ಯ ಸರಕಾರ ಕೋವಿಡ್ ಹಗರಣವನ್ನು ಬಯಲಿಗೆಳೆಯಲು ಮುಂದಾಗಿದ್ದು ದ್ವೇಶರಾಜಕಾರಣ ಬೇಗುದಿ ಬೆಳೆಯುತ್ತಿದೆಂದು ಸ್ಪಷ್ಟವಾಗುತ್ತಿದೆ.


