ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರುಗಳನ್ನು ನೇಮಕ ಮಾಡಿ ಅವರಿಗೆ ಸರ್ಕಾರದಿಂದ ಗೌರವ ಧನ, ಭತ್ಯೆ ನೀಡುತ್ತಿರುವ ವಿಚಾರ ವಿಧಾನಸಭೆಯಲ್ಲಿಂದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿ ಈ ಸಮಿತಿಗಳನ್ನು ರದ್ದುಪಡಿಸಿ ಎಂದು ಆಗ್ರಹಿಸಿ ವಿಪಕ್ಷಗಳು ಸದನದಲ್ಲಿ ಧರಣಿ ನಡೆಸಿದವು. ಪ್ರಶ್ನೋತ್ತವ ಅವಧಿಯಲ್ಲೇ ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರ ಸದನದಲ್ಲಿ ಪ್ರಸ್ತಾಪಗೊಂಡು ವಿಪಕ್ಷಗಳ ಆಕ್ಷೇಪ, ಅಸಮಾಧಾನಕ್ಕೆ ಕಾರಣವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಗದ್ದಲದ ವಾತಾವರಣ ರೂಪುಗೊಂಡು ಸದನವನ್ನು ಸಭಾಧ್ಯಕ್ಷರು 10 ನಿಮಿಷಗಳ ಕಾಲ ಮುಂದೂಡಿದರು.
ನAತರ ಸಭಾಧ್ಯಕ್ಷರ ಕೊಠಡಿಯಲ್ಲಿ ಸಂಧಾನ ಸಭೆ ನಡೆದು ಅರ್ಧ ಗಂಟೆ ಬಳಿಕ ಸದನ ಮತ್ತೆ ಸಮಾವೇಶಗೊಂಡಿತು. ಸರ್ಕಾರದ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡು ವಿಪಕ್ಷ ಸದಸ್ಯರು ಶಾಸಕರ ನೇತೃತ್ವದಲ್ಲೇ ಸಮಿತಿ ಮಾಡಿ ಎಂಬ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಈಗಲೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿ, ಸದ್ಯಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಮುಂದುವರೆಯುತ್ತವೆ ಎಂದು ಹೇಳಿ, ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರದಿಂದ ತೃಪ್ತರಾಗದ ವಿಪಕ್ಷ ಸದಸ್ಯರು ಪ್ರತಿ ತಾಲ್ಲೂಕಿನಲ್ಲೂ ಶಾಸಕರೇ ಸುಪ್ರೀಂ. ಶಾಸಕರನ್ನು ಬಿಟ್ಟು ಬೇರೊಬ್ಬರು ಅಧಿಕಾರಿಗಳ ಸಭೆ ನಡೆಸುವುದು ಸರಿಯಲ್ಲ, ಈ ಸಮಿತಿಯನ್ನು ರದ್ದು ಮಾಡಿ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿ ಸರ್ಕಾರದಿಂದ ಗ್ಯಾರಂಟಿ ಸಮಿತಿ ಸದಸ್ಯರಿಗೆ ಹಣ ನೀಡುವುದು ಬೇಡ ಎಂದು ಪಟ್ಟು ಹಿಡಿದು ಧರಣಿ ಆರಂಭಿಸಿದರು.
ಪ್ರತಿಪಕ್ಷ ಸದಸ್ಯರ ಧರಣಿಯಿಂದ ಸದನದಲ್ಲಿ ಗದ್ದಲ, ಕೋಲಾಹಲದ ವಾತಾವರಣ ರೂಪುಗೊಂಡಿತು. ಇದರ ನಡುವೆಯೇ ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಶ್ನೋತ್ತರ ಕಲಾಪ, ವಿಧೇಯಕ ಮಂಡನೆ ಕಲಾಪವನ್ನು ನಡೆಸಿ, ನಂತರ ಸದನವನ್ನು ಭೋಜನ ವಿರಾಮಕ್ಕೆ ಮುಂದೂಡಿದರು.
ಇದಕ್ಕೂ ಮುನ್ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಎಂ.ಟಿ. ಕೃಷ್ಣಪ್ಪ ಅವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ನೇಮಕಗೊಂಡಿರುವ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅಧ್ಯಕ್ಷರು, ಸದಸ್ಯರುಗಳಿಗೆ ಸರ್ಕಾರ ನೀಡುತ್ತಿರುವ ಸಂಭಾವನೆ ಎಷ್ಟು ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಮಾಸಿಕ ಗೌರವ ಧನ 40 ಸಾವಿರ, ಉಪಾಧ್ಯಕ್ಷರಿಗೆ ಮಾಸಿಕ ಗೌರವ ಧನ 10 ಸಾವಿರ ಹಾಗೂ ಸದಸ್ಯರಿಗೆ ಸಭಾ ಭತ್ಯೆ ತಿಂಗಳಿಗೆ ಗರಿಷ್ಠ 2 ಸಭೆಗಳಂತೆ ಪ್ರತಿ ಸಭೆಗೆ 1100ರೂ., ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಮಾಸಿಕ ಗೌರವ ಧನ 25 ಸಾವಿರ, ಪ್ರತಿ ಸದಸ್ಯರಿಗೆ ಸಭಾ ಭತ್ಯೆ ತಿಂಗಳಿಗೆ 2 ಸಭೆಗಳಂತೆ ಸಾವಿರ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಸಚಿವರ ಈ ಉತ್ತರ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಸಿಟ್ಟಿಗೆ ಕಾರಣವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದ ಬೊಕ್ಕಸದಿಂದ ಹಣ ಕೊಡುತ್ತಿದ್ದೀರಿ, ಇದು ಕಾನೂನು ಬಾಹಿರ. ಈ ರೀತಿ ಹಣ ಕೊಡಲು ಅವಕಾಶ ಇಲ್ಲ. ಕೂಡಲೇ ಇದನ್ನು ವಾಪಸ್ ಪಡೆಯಿರಿ ಎಂದು ಒಮ್ಮೆಗೆ ಎಲ್ಲ ಸದಸ್ಯರು ಏರಿದ ಧ್ವನಿಯಲ್ಲಿ ಆಗ್ರಹಿಸಿದ್ದು, ಸದನದಲ್ಲಿ ಗದ್ದಲದ ವಾತಾವರಣಕ್ಕೆ ಕಾರಣವಾಯಿತು. ಈ ಗದ್ದಲದಲ್ಲೇ ಮಾತನಾಡಿದಪ್ರತಿಪಕ್ಷ ನಾಯಕ ಆರ್. ಅಶೋಕ್, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚು ಮಾಡಲು ಹಿಂದೆ-ಮುAದೆ ನೋಡುತ್ತೀರಿ, ಆದರೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರುಗಳಿಗೆ ದೊಡ್ಡ ಪ್ರಮಾಣದಲ್ಲಿ ಗೌರವ ಧನ ನೀಡುತ್ತಿದ್ದೀರಿ, ಇದು ಸರಿಯಲ್ಲ. ಗ್ಯಾರಂಟಿ ಯೋಜನೆಗಳಿಗೆ ಆನ್‌ಲೈನ್ ಮುಖಾಂತರವೇ ಹಣ ಪಾವತಿಯಾಗುತ್ತಿದೆ. ಸರ್ಕಾರದಿಂದ ಹಣ ಕೊಡುವುದು ಸರಿಯಲ್ಲ ಎಂದರು.
ಇದರಿಂದ ಸದನದಲ್ಲಿ ಕೋಲಾಹಲದ ವಾತಾವರಣ ರೂಪುಗೊಂಡಿತು. ಗದ್ದಲದಲ್ಲೇ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಈ ಸರ್ಕಾರವನ್ನು ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಸರ್ಕಾರದಲ್ಲಿ ಭಾಗಿಯಾಗುವ ಹಕ್ಕಿದೆ. ಅವರ ಹಕ್ಕನ್ನು ನಾವು ನೀಡಿದ್ದೇವೆ ಅಷ್ಟೇ ಎಂದು ಹೇಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ನೀಡುತ್ತಿರುವ ಗೌರವ ಧನ, ಭತ್ಯೆಯನ್ನು ಸಮರ್ಥಿಸಿಕೊಂಡರು.ಉಪಮುಖ್ಯಮAತ್ರಿಗಳ ಈ ಉತ್ತರದಿಂದ ಮತ್ತಷ್ಟು ಸಿಟ್ಟಾದ ಪ್ರತಿಪಕ್ಷ ಸದಸ್ಯರು ಧರಣಿ ನಡೆಸಲು ಮುಂದಾಗುತ್ತಿದ್ದAತೆಯೇ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸದನವನ್ನು 10 ನಿಮಿಷಗಳ ಕಾಲ
ಮುಂದೂಡಿದರು.