ಬೆಂಗಳೂರು : ದಿವಂಗತ ಜಯಲಲಿತಾ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಜಯಲಲಿತಾಗೆ ಸಂಬಂದಿಸಿದ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿ ಜಯಲಲಿತಾ ವಾರಸುದಾರರಾದ ಜೆ.ದೀಪಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ನ್ಯಾಯಮೂರ್ತಿ ವಿ. ಶ್ರಿಶಾನಂದ ಅವರಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. ಕಳೆದ ವರ್ಷ ಮಾ.6, 7 ರಂದು ದಿ.ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದ ಒಡವೆಯನ್ನು ಹಸ್ತಾಂತರಿಸಬೇಕಿತ್ತು. ಆದರೆ, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾದಂತೆ ಎಂಬುದಾಗಿ ಜೆ.ದೀಪಾ ಅರ್ಜಿಯನ್ನು ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳಲಾಗಿದೆ ಎಂಬುದಾಗಿ ಎಸ್ಪಿಪಿ ಕಿರಣ್
ಜವಳಿ ಆಕ್ಷೇಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.