ಬೆಂಗಳೂರು ; ಬಿಜೆಪಿ ಶಾಸಕ ಮುನಿರತ್ನಗೆ ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಆಗಿರೋ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. 2 ಶ್ಯೂರಿಟಗಳೊಂದಿಗೆ 2 ಲಕ್ಷ ಬಾಂಡ್ ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿ ಆದೇಶಿಸಿದೆ.
ಈ ಹಿಂದೆ ನಡೆದ ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಎಸ್‌ಪಿಪಿ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು 7 ವರ್ಷದ ಹಳೆಯ ಕೇಸ್. ಅದರಲ್ಲೂ ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ರು.
ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜನಾಂಗಿಯ ನಿಂದನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯ ಆಗೋದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು ಎಂದು ವಾದ ಮಂಡಿಸಿದ್ರು.


