Thursday, July 23, 2026
Homeರಾಜಕೀಯಬೆಂಗಳೂರು : ಜಾಮೀನಿನ ಮೇಲೆ ಬಿಡುಗಡೆಗೊಂಡ ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮತ್ತೆ...

ಬೆಂಗಳೂರು : ಜಾಮೀನಿನ ಮೇಲೆ ಬಿಡುಗಡೆಗೊಂಡ ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮತ್ತೆ ಅರೆಸ್ಟ್..!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ 2020 ರಿಂದ 2022ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದು ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ.ನಿನ್ನೆ ಮಾಜಿ ಸಚಿವನ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಕೊಟ್ಟಿತ್ತು. ಈ ಖುಷಿ ಸುದ್ದಿಯ ನಡುವೆಯೇ ಶಾಸಕರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡು ಕೋರ್ಟ್​​ಗೆ ಹಾಜರು ಪಡಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular