ಬೆಂಗಳೂರು : ರಾಜ್ಯದ ಉಡುಪಿ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ರೆಡ್ ಅಲರ್ಟ್ ನೀಡಲಾಗಿದೆ.ಉತ್ತರ ಕನ್ನಡ, ಮೈಸೂರು, ಚಿಕ್ಕಮಗಳೂರು, ಹಾಸನ ಮತ್ತು ಚಾಮರಾಜನಗರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಉಳಿದ ಭಾಗಗಳಲ್ಲಿ ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಬಗ್ಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 4೦-5೦ ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಾಗುವುದರಿಂದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಶಾಲಾ ಕಾಲೇಜುಗಳು ಮುಚ್ಚಲ್ಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ, ಈ ಪ್ರದೇಶದ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.