Wednesday, October 22, 2025
Flats for sale
Homeರಾಜ್ಯಬೆಂಗಳೂರು : ತಪಾಸಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ, ಚರ್ಮರೋಗ ತಜ್ಞನ ಬಂಧನ..!

ಬೆಂಗಳೂರು : ತಪಾಸಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ, ಚರ್ಮರೋಗ ತಜ್ಞನ ಬಂಧನ..!

ಬೆಂಗಳೂರು : ವೈದ್ಯಕೀಯ ಪರೀಕ್ಷೆಯ ನೆಪದಲ್ಲಿ 22 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ ಖಾಸಗಿ ಕ್ಲಿನಿಕ್‌ನ 56 ವರ್ಷದ ಚರ್ಮರೋಗ ತಜ್ಞರೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶನಿವಾರ ಸಂಜೆ ಅಶೋಕನಗರದಲ್ಲಿರುವ ಖಾಸಗಿ ಕ್ಲಿನಿಕ್‌ಗೆ ಯುವತಿ ತನ್ನ ತಂದೆಯೊAದಿಗೆ ಚರ್ಮದ ಸೋಂಕಿಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ತಪಾಸಣೆ ವೇಳೆ ಯುವತಿಯ ತಂದೆ ಹೊರಗಿದ್ದರು. ಈ ಸಂದರ್ಭವನ್ನು ಬಳಸಿಕೊAಡ ವೈದ್ಯ ಡಾ.ಪ್ರವೀಣ್ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿ ನೀಡಿರುವ ದೂರಿನ ಪ್ರಕಾರ, ಸುಮಾರು 30 ನಿಮಿಷಗಳ ಕಾಲ ಆಕೆಗೆ ಕಿರುಕುಳ ನೀಡಿದ್ದಾರೆ. ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಪದೇ ಪದೇ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಅಷ್ಟೇ ಅಲ್ಲದೆ, ವೈದ್ಯಕೀಯ ಪರೀಕ್ಷೆಯ ಭಾಗ ಎಂದು ಹೇಳಿ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ. ಆಕೆಯ ವಿರೋಧದ ನಡುವೆಯೂ ಹಲವು ಬಾರಿ ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಮತ್ತು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಿರುಕುಳ ನೀಡಿದ್ದಲ್ಲದೆ, ವೈದ್ಯರು ಖಾಸಗಿಯಾಗಿ ಒಟ್ಟಿಗೆ ಸಮಯ ಕಳೆಯಲು ಹೋಟೆಲ್ ರೂಮ್ ಬುಕ್ ಮಾಡುವುದಾಗಿ ಹೇಳಿದ್ದರು ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾರೆ. ಘಟನೆ ನಡೆದ ನಂತರ ಯುವತಿ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆಕೆಯ ಕುಟುಂಬ ಸದಸ್ಯರು ಸ್ಥಳೀಯ ನಿವಾಸಿಗಳೊಂದಿಗೆ ಕ್ಲಿನಿಕ್ ಹೊರಗೆ ಜಮಾಯಿಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ವೈದ್ಯ ಪ್ರವೀಣ್ ಅವರನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ತಮ್ಮ ಕ್ರಮಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಆದಾಗ್ಯೂ, ಯುವತಿಯ ದೂರಿನನ್ವಯ ಅಶೋಕ್ ನಗರ ಪೊಲೀಸರು ಡಾ. ಪ್ರವೀಣ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ ೭೫(ಲೈಂಗಿಕ ಕಿರುಕುಳ) ಮತ್ತು ಮಹಿಳೆಯ ಘನತೆಗೆ ಅವಮಾನ ಮಾಡುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ ಎಸಗಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular