ಮಂಗಳೂರು : ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಧಮ್ಕಿ ವೀರ ರಾಜೀವ್ ಗೌಡನ ಬಂಧನವಾಗಿದೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ.
ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದನು.ಇದೀಗ ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು, ಜನವರಿ 23: ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) . ಇಂದು ಬೆಳಗ್ಗೆ ಅಷ್ಟೇ ಆದ್ರೆ, ಪೊಲೀಸರು ಬಂಧನಕ್ಕೆ ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಾಜೀವ್ ಗೌಡ ಮಂಗಳೂರಿನಿಂದ ಎಸ್ಕೇಪ್ ಆಗಿದ್ದ.ಅದಲ್ಲದೆ ಮಂಗಳೂರು ಜುಂಕ್ಷನ್ ನಲ್ಲಿ ಕಾರನ್ನಿಟ್ಟು ಪಚ್ಚನಾಡಿ ಮೂಲದ ರೆಸಾರ್ಟ್ ಒಂದಲ್ಲಿ ತಂಗಿದ್ದು ಬಳಿಕ ರೆಸಾರ್ಟ್ ಮಾಲೀಕನ ಕರಲ್ಲಿ ಕೇರಳಕ್ಕೆ ಪಲಾಯನ ಗೊಂಡಿದ್ದನೆಂದು ಮಾಹಿತಿ ದೊರೆತಿದೆ.ಈ ಬಗ್ಗೆ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಸಹ ಅಲರ್ಟ್ ಆಗಿದ್ದರು ಎಂದು ತಿಳಿದಿದೆ.


