ಬೆಂಗಳೂರು : ದೆಹಲಿಯಿಂದ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರು ಬೇಟಿ ಮಾಡಿದ್ದಾರೆ.
ಇನ್ನೇನು ಸಿ.ಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಮಾಡಿದ್ದಾರೆ.
ವಿಐಪಿ ಟರ್ಮಿನಲ್ ನಲ್ಲಿ ಉಭಯ ನಾಯಕರ ಚರ್ಚೆ ನಡೆದಿದ್ದು ಬಳಿಕ ಏರ್ಪೋರ್ಟ್ ನಿಂದ ಬೆಂಗಳೂರಿನತ್ತ ನಾಯಕರು ಹೊರಟಿದ್ದಾರೆ.
ಪ್ರಸಕ್ತ ವಿದ್ಯಮಾನಗಳು ಹಾಗೂ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಬಳಿಕ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.


