Wednesday, April 8, 2026
Flats for sale
Homeರಾಜ್ಯಬೆಂಗಳೂರು : ನಾಳೆ ಪಿಯುಸಿ ಪರೀಕ್ಷೆಯ ಫಲಿತಾಂಶ, 7 ಲಕ್ಷ ಮಕ್ಕಳ ಹಣೆಬರಹ ಗುರುವಾರ ನಿರ್ಧಾರ.

ಬೆಂಗಳೂರು : ನಾಳೆ ಪಿಯುಸಿ ಪರೀಕ್ಷೆಯ ಫಲಿತಾಂಶ, 7 ಲಕ್ಷ ಮಕ್ಕಳ ಹಣೆಬರಹ ಗುರುವಾರ ನಿರ್ಧಾರ.

ಬೆಂಗಳೂರು : ಕಳೆದ ಫೆಬ್ರವರಿ-ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ. 9ರ ಗುರುವಾರದಂದು ಪ್ರಕಟವಾಗಲಿದೆ. ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಇರುವ ನೀತಿ ಸಂಹಿತೆಯಿಂದ ಆಯೋಗದ ಅನುಮತಿ ಪಡೆಯಬೇಕಾಗುತ್ತದೆ.

ಫಲಿತಾಂಶ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆಯು ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿದೆ. ಯಾವುದೇ ಕ್ಷಣದಲ್ಲಿ ಅನುಮತಿ ದೊರೆಯುವ ಸಂಭವಿದೆ. ನಂತರ ಬೆಳಗ್ಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ರಾಜ್ಯದ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 7,1೦,363 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಹಣೆಬರಹ ಗುರುವಾರ ನಿರ್ಧಾರವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 25 ರಿಂದ ಮೇ. 8 ರವರೆಗೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.

 kseab.karnataka.gov.in  ಮತ್ತು karresults.nic.in. ಈ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

Most Popular