Thursday, May 28, 2026
Flats for sale
Homeಜಿಲ್ಲೆಬೆಂಗಳೂರು : ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರ ? ಅದಕ್ಕಾಗಿ ರಾಜ್ಯಪಾಲರ...

ಬೆಂಗಳೂರು : ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರ ? ಅದಕ್ಕಾಗಿ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರ…!

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ರಾಜಭವನಕ್ಕೆ ಪತ್ರ ರವಾನಿಸಲಾಗಿದೆ ಎನ್ನಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ನಿವಾಸದಲ್ಲಿ ಉಪಹಾರ ಕೂಟ ಆಯೋಜಿಸಲಾಗಿದ್ದು, ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಜೋರಾಗಿದ್ದು, ಉಪ ಮುಖ್ಯಮಂತ್ರಿ D. K. ಶಿ ಅವರ ಹೆಸರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕೇಳಿಬರುತ್ತಿದೆ. ಆದರೆ, ಈ ಬೆಳವಣಿಗೆ ಕುರಿತು ಮುಖ್ಯಮಂತ್ರಿ ಕಚೇರಿ, ರಾಜಭವನ ಅಥವಾ ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ದೃಢೀಕರಣ ಇನ್ನೂ ಹೊರಬಿದ್ದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular