Wednesday, November 5, 2025
Flats for sale
Homeರಾಜಕೀಯಬೆಂಗಳೂರು : ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದ ಅಧಿಕಾರಿಗಳಿಗೆಸರ್ಕಾರದಿಂದ ಬಹುಮಾನ : ಬಿಜೆಪಿ ಶಾಸಕ ಯತ್ನಾಳ್..!

ಬೆಂಗಳೂರು : ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದ ಅಧಿಕಾರಿಗಳಿಗೆಸರ್ಕಾರದಿಂದ ಬಹುಮಾನ : ಬಿಜೆಪಿ ಶಾಸಕ ಯತ್ನಾಳ್..!

ಬೆಂಗಳೂರು : ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,೦೦೦ ರೂ ಬಹುಮಾನ ಘೋಷಿಸಿದ ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಬೆಳಗಾವಿ ನಗರದ ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,೦೦೦ ರೂ. ಬಹುಮಾನ ನೀಡಿದ್ದಾರೆ. ಇನ್‌ಸ್ಪೆಕ್ಟರ್ ಗಡ್ಡೇಕರಹಾಗೂ ಹಿತೇಂದ್ರ ಪಂಚಮಸಾಲಿ ಸಮುದಾಯಕ್ಕೆ 20 ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ
ಅಮಾನವೀಯವಾಗಿ ನಡೆದುಕೊಂಡಿದ್ದರು.

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಖುದ್ದು ಂಆಉP ಶ್ರೇಣಿಯ ಅಧಿಕಾರಿ ಫೀಲ್ಡಿಗೆ ಇಳಿದದ್ದು ಬಹುಶಃ ಇದೆ ಮೊದಲ ಬಾರಿ ಇರಬೇಕು. ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿಯನ್ನು ಸಹ ನೀಡಿದ್ದರು.
ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್ ನ್ಯಾಯಯುತವಾದ ಬೇಡಿಕೆಯನ್ನು ಲಾಠಿ ಮೂಲಕ ಉತ್ತರಿಸಿದ ಲಿಂಗಾಯತ ವಿರೋಧಿ ಹಾಗೂ ಹಿಂದೂ ವಿರೋಧಿ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಒಂದು ಕೋಮಿನ ತಪ್ಪಿತಸ್ಥರ ವಿರುದ್ಧ ಪ್ರಕರಣವನ್ನು ಕೈ ಬಿಡಬೇಕು ಎಂದು ಶಿಫಾರಸನ್ನು ಬಹುತೇಕ ಒಪ್ಪಿಕೊಂಡಿದ್ದ ಸರ್ಕಾರ, ಇಂದು ಪಂಚಮಸಾಲಿಗಳ
ನೆತ್ತರು ಹರಿಸಿದವರಿಗೆ ಬಹುಮಾನ ಘೋಷಣೆ ಮಾಡಿದೆ. ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ
ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸೋಲ್ಲ ಎಂದು ಯತ್ನಾಳ್ ಅಸಮಾಧಾನ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular