ಬೆಂಗಳೂರು : ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್’ ಸಿನಿಮಾ ತಂಡದವರು ವಿಮಾನ ದುರಂತದಿಂದ ಪಾರಾಗಿದ್ದಾರೆ. ಮುಂದೆ ಬಿಡುಗಡೆಯಾಗುವ ‘ಮಾರ್ಟಿನ್’ ಸಿನಿಮಾದ ಶೂಟಿಂಗ್ ಬಿರುಸಿನಿಂದ ಸಾಗುತ್ತಿವೆ. ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದರು.ಅಲ್ಲಿ ಶೂಟಿಂಗ್ ಮುಗಿಸಿಕೊಂಡು ದೆಹಲಿಗೆ ವಾಪಸ್ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡ ಧ್ರುವ ಸರ್ಜಾ ,ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ,ಇದು ಮರುಜನ್ಮ,ಆಂಜನೇಯನೇ ನಮ್ಮನ್ನು ಕಾಪಾಡಿದ್ದು ನನ್ನ ಜೀವನದ ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಯಾವತ್ತೂ ನಡೆದಿಲ್ಲ ಈಗ ನಾವು ಸೇಫ್ ಆಗಿದ್ದೇವೆ ಎಂದು ಪೈಲಟ್ಗೆ ಧನ್ಯವಾದ’ತಿಳಿಸಿದ್ದಾರೆ.