ಬೆಂಗಳೂರು : ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ಪತ್ರಕರ್ತರ ಬಸ್ ಪಾಸ್ ಹಿರಿಯ ಪತ್ರಕರ್ತರಿಗೆ ಪಿಂಚಣಿ ಆರೋಗ್ಯ ವಿಮೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ಮಹಾತ್ಮ ಗಾಂಧಿಯ ಭಾವಚಿತ್ರಕ್ಕೆ ದೀಪ ಬೆಳಗುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಪತ್ರಕರ್ತರಿಗೆ ಸಿಗುವಂತ ಹಕ್ಕನ್ನು ನೀಡಬೇಕೆಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರಾಜ್ಯದ್ಯಂತ ಜಿಲ್ಲೆ ಮತ್ತು ತಾಲ್ಲೂಕು ಪತ್ರಿಕ ಹಾಗೂ ಮಾಧ್ಯಮ ವರದಿಗಾರರು ಆಗಮಿಸಿದ್ದು ನಮ್ಮ ಪತ್ರಕರ್ತರ ಹಕ್ಕುಗಳನ್ನು ಸರ್ಕಾರ ಹಾಗೂ ವಾರ್ತಾ ಇಲಾಖೆ ಈಡೇರಿಸಬೇಕುಂದು ಸರ್ಕಾರದ ವಿರುದ್ಧ ಪ್ರತಿಭಟಿಸಿ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆಬಿ ಪ್ರಭಾಕರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಮನವಿಯನ್ನು ಸ್ವೀಕರಿಸಿದ ಕೆಬಿ ಪ್ರಭಾಕರ್ ಮಾತನಾಡಿ ಪತ್ರಕರ್ತರಿಗೆ ಬಸ್ ಪಾಸ್ ಮಹಶಾಸನ ಪಿಂಚಣಿ ಇನ್ನಿತರೆ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಗಳ ಹತ್ತಿರ ಮಾತನಾಡಿ ನಮ್ಮ ಪತ್ರಕರ್ತರಿಗೆ ಬೇಕಾದಂತ ಸೌಲಭ್ಯಗಳನ್ನು ಒದಗಿಸಲು ಮಾತನಾಡುತ್ತೇನೆಂದು ಭರವಸೆ ಕೊಟ್ಟರು.


