Saturday, January 17, 2026
Flats for sale
Homeರಾಜ್ಯಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ,ರಾಜ್ಯದ ಹಲವೆಡೆ, ಕರಾವಳಿ ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ...

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ,ರಾಜ್ಯದ ಹಲವೆಡೆ, ಕರಾವಳಿ ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ..!

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು‌ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 1 ರಿಂದ ಡಿಸೆಂಬರ್‌ 3 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರ ಇಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಫೆಂಗಾಲ್ ಚಂಡಮಾರುತವು ಪಶ್ಚಿಮ-ವಾಯುವ್ಯದ ಕಡೆಗೆ ಚಳಿಸುತ್ತಿದ್ದು ಮತ್ತು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯನ್ನು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಪುದುಚೇರಿಗೆ ಶನಿವಾರ ಮಧ್ಯಾಹ್ನ ಭೂ ಪ್ರದೇಶ ಪ್ರವೇಶಿಸುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 70-80 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡು, ಕೇರಳ, ಆಂಧ್ರದ ಕಡಲತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular