ಬೆಂಗಳೂರು ; ಚುನಾವಣೆ ಬಂತೆಂದರೆ ಸಾಕು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವವರ ಸಂಖ್ಯೆ ಇತ್ತೀಚಿಗೆ ಜಾಸ್ತಿಯಾಗುತ್ತಿದೆ. ಇದೀಗ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.


