ಬೆಂಗಳೂರು ; ಬೆಂಗಳೂರಿನಿಂದ ವಾರಣಾಸಿಗೆ ತೆರಳಬೇಕಿದ್ದ ವಿಮಾನ ತಾಂತ್ರಿಕ ದೋಷದಿಂದ ಮಂಗಳವಾರ ಮುಂಜಾನೆ ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 6.15ಕ್ಕೆ ತುರ್ತು ಭೂಸ್ಪರ್ಶ ಮಾಡಿತು. ವಿಮಾನದಲ್ಲಿದ್ದ ಎಲ್ಲಾ 137 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.
ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6E897 ಅನ್ನು ಮುನ್ನೆಚ್ಚರಿಕೆಯಾಗಿ ಹೈದರಾಬಾದ್‌ಗೆ ತಿರುಗಿಸಲಾಗಿದೆ. ಪೈಲಟ್ ತಾಂತ್ರಿಕ ದೋಷವನ್ನು ಗಮನಿಸಿದರು ಮತ್ತು ಮುನ್ನೆಚ್ಚರಿಕೆಯಾಗಿ ಹೈದರಾಬಾದ್‌ಗೆ ತಿರುಗಿಸಿದರು ”ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪ್ರಯಾಣಿಕರಿಗೆ ವಾರಣಾಸಿಗೆ ತೆರಳಲು ಪರ್ಯಾಯ ವಿಮಾನವನ್ನು ಒದಗಿಸಲಾಗಿದೆ ಎಂದು ಏರ್‌ಲೈನ್ಸ್ ಹೇಳಿದೆ. ಪ್ರಸ್ತುತ, ಇಂಡಿಗೋ ವಿಮಾನವು ಹೈದರಾಬಾದ್‌ನಲ್ಲಿ ಅಗತ್ಯ ತಪಾಸಣೆಗೆ ಒಳಗಾಗುತ್ತಿದೆ ಎಂದು ಹೇಳಿದೆ.