Saturday, October 17, 2026
Homeಜಿಲ್ಲೆಬೆಂಗಳೂರು : ಮಂಗಳೂರಿನಲ್ಲಿ ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ.

ಬೆಂಗಳೂರು : ಮಂಗಳೂರಿನಲ್ಲಿ ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ.

ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಆಗಸ್ಟ್ 31ರಂದು ಅಧಿಕೃತ ಪತ್ರ ಹೊರಡಿಸಿದ್ದಾರೆ.

ಕರಾವಳಿ ಜಿಲ್ಲೆಗಳ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ. ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸುವ ಕುರಿತು ಸರ್ಕಾರದ ಅಧಿಕೃತ ಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಸೆಪ್ಟೆಂಬರ್ 18ರಂದು ನಡೆಯಲಿರುವ ಸಭೆ ಕರಾವಳಿ ಭಾಗದ ಹಲವು ಪ್ರಮುಖ ವಿಚಾರಗಳ ಚರ್ಚೆಗೆ ವೇದಿಕೆಯಾಗುವ ನಿರೀಕ್ಷೆ ಇದೆ

RELATED ARTICLES

LEAVE A REPLY

Please enter your comment!
Please enter your name here

Most Popular