ಬೆಂಗಳೂರು : ಮಕ್ಕಳಿಂದ ಮೊನ್ನೆ ತಾನೇ ಚರಂಡಿ ಕ್ಲೀನ್ ಮಾಡಿಸಿದ್ದು ಆಯ್ತು ಈವಾಗ ಇನ್ನೊಂದು ಸುದ್ದಿಯಾಗಿದೆ ,ಈ ಸರಕಾರಿ ಶಾಲೆಯ ಶಿಕ್ಷಕರಿಗೆ ಇತ್ತೀಚಿನ ಸಮಯದಲ್ಲಿ ಏನಾಗ್ತಾ ಇದೆಯೋ ಗೊತ್ತಿಲ್ಲ ,ಇಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಈ ಸಂಬಂಧ ಶಾಲೆಯ ಶಿಕ್ಷಕರ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಜಾಪ್ರಭುತ್ವ ವಿರೋಧಿ ಘಟನೆ ಸಿದ್ದರಾಮಯ್ಯ ಕಾಲದಲ್ಲೇ ಈ ಘಟನೆಗಳು ನಡೆಯುತ್ತಿವೆ ಎಂದಿದ್ದಾರೆ.ಈ ಸರಕಾರ ಬಂದ ನಂತರ ಇಂತಹದೇ ನಡೆಯುತ್ತಾ ಇದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ . ಈ ಘಟನೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಸಮಾಜಕಲ್ಯಾಣ ಸಚಿವ H.C.ಮಹದೇವಪ್ಪ ಈ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ಆ್ಯಸಿಡ್ ಹಾಕ್ತಿದ್ರೆ, ಮತ್ತೊಬ್ಬ ಪೊರಕೆ ಹಿಡಿದು ಗುಡಿಸ್ತಿರುವ ವಿಡಿಯೋ ವೈರಲ್ ಆಗಿದೆ ಈ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳೀಯರು ಪ್ರತಿಭಟನೆಯನ್ನ ಮಾಡಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ ಅಂದ್ರಹಳ್ಳಿ ಶಾಲೆ ಘಟನೆ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿಯ ಘಟನೆ ನಡೆಯಬಾರದು. ಶಾಲಾ ಮಕ್ಕಳನ್ನು ಈ ರೀತಿಯ ಕೆಲಸಗಳಿಗೆ ಬಳಸಿಕೊಳ್ಳಬಾರದು. ಇಂತಹ ಕೆಲಸ ಮಾಡಿಸಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ,ಕೋಲಾರದ ಬಳಿಕ ಬೆಂಗಳೂರಿನಲ್ಲಿ ಕೂಡಾ ಶೌಚಾಲಯ ಗುಂಡಿಗೆ ಮಕ್ಕಳನ್ನು ಇಳಿಸಿರುವ ಘಟನೆ ಆಗಿದೆ. ಪ್ರಜಾಪ್ರಭುತ್ವ ವಿರೋಧಿ ಘಟನೆಗಳು ಸಿದ್ದರಾಮಯ್ಯನವರ ಕಾಲದಲ್ಲೇ ಆಗುತ್ತಿವೆ. ನಾನು ಇದರ ಬಗ್ಗೆ ಎಲ್ಲಾ ಮಾಹಿತಿ ತರಿಸಿಕೊಳ್ಳುತ್ತೇನೆ. ಆದರೆ ಇವತ್ತೇ ಬೆಂಗಳೂರಿನ ಅಂದ್ರಹಳ್ಳಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ ಪ್ರಜಾಪ್ರಭುತ್ವ ವಿರೋಧಿ ಘಟನೆ ಸಿದ್ದರಾಮಯ್ಯ ಕಾಲದಲ್ಲೇ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಯಾರನ್ನೂ ರಕ್ಷಣೆ ಮಾಡಲು ಹೋಗಲ್ಲ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಸಭೆ ದಿಢೀರ್ ಸಭೆ ಕರೆದಿದ್ದು ಇದರ ಬಗ್ಗೆ ಮುಂದಿನ ಕಠೀಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.