ಬೆಂಗಳೂರು : ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಬಿಜೆಪಿ ಮುಖಂಡರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾರ್ ಸ್ವಾಗತಿಸಿದರು.
ರಾಜ್ಯದಲ್ಲಿ ಕಳೆದ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ್ದಕ್ಕೆ ಬಿಜೆಪಿ ತೊರೆದು ಸ್ವತಂತ್ರವಾಗಿ ಸ್ಪರ್ಧಿಸಿ ಬಿಜೆಪಿ ಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು.ಪುತ್ತಿಲ ಪರಿವಾರವನ್ನು ಕಟ್ಟಿ ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ್ ರಾವ್, ಪುತ್ತಿಲ ಕುಲದ ಅಧ್ಯಕ್ಷ ಪ್ರಸನ್ನ ಮಾರ್ತ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


