ಬೆಂಗಳೂರು : ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಒಳಗೊಂಡ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾದರು.
ಮಾವೋವಾದಿ ನಕ್ಸಲರು ಶರಣಾಗತಿಯಿಂದ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಂತಹದೊAದು ಘಟನೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಸಾಕ್ಷಿಯಾಗಿದೆ. ಮುಂಡಗಾರು ಲತಾ ನೇತೃತ್ವದಲ್ಲಿ ಆರು ಮಂದಿ ನಕ್ಸಲರರು ಬಂದೂಕಿನ ಹಾದಿಯನ್ನು ತೊರೆದು ಪ್ರಜಾಸತ್ತಾತ್ಮಕ ಹಾದಿಯನ್ನು ತುಳಿಯುವ ಉದ್ದೇಶದಿಂದ ಶರಣಾಗಿದ್ದಾರೆ.
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರು ನಕ್ಸಲರು ಶರಣಾಗತರಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯಗಳಿಗೆಯಲ್ಲಿ ಬದಲಾವಣೆಗೊಂಡು ಚಿಕ್ಕಮಗಳೂರಿನಿಂದ ನೇರವಾಗಿ ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ನಕ್ಸಲರು ಶರಣಾಗತರಾದರು.
ಶೃಂಗೇರಿ ತಾಲೂಕು ಮುಂಡಗಾರು ಲತಾ, ದಕ್ಷಿಣ ಕನ್ನಡ ಜಿಲ್ಲೆ ಕುತ್ಲೂರಿನ ಸುಂದರಿ, ಬಾಳೆಹೊಳೆಯ ವನಜಾಕ್ಷಿ, ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅಲಿಯಾಸ್ ಜಯಣ್ಣ, ತಮಿಳುನಾಡಿನ ಕೆ.ವಸಂತ, ಕೇರಳದ ಟಿ.ಎನ್. ಜೀಶ ಶರಣಾಗಿ ಸಮಾಜದ ಮುಖ್ಯವಾಹಿನಿ ಸೇರಿದ್ದಾರೆ. ಶೃಂಗೇರಿ ತಾಲೂಕು ಕಿಗ್ಗಾ ಮೂಲದ ರವಿ ಎಂಬಾತ ಮಾತ್ರ ಶರಣಾಗುವುದು ಬಾಕಿ ಇದ್ದು, ಆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಹಿಳಾ ಮಾವೋವಾದಿಗಳು 18 ಬೇಡಿಕೆಯನ್ನು ಇಟ್ಟಿದ್ದಾರೆ. ಅಲ್ಲದೆ ಘನತೆಯಿಂದ ಶರಣಾಗತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂಬ ಮನವಿಯನ್ನು ಮಾಡಿದ್ದಾರೆ. ನಕ್ಸಲ್ ಮುಖಂಡ ವಿಕ್ರಂಗೌಡ ಎನ್ಕೌAಟರ್ಗೆ ಬಲಿಯಾದ ನಂತರ ಉಳಿದ ನಕ್ಸಲರನ್ನು ಶರಣಾಗಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನ 6 ಜನ ಸಮಾಜದ ಮುಖ್ಯವಾಹಿನಿಗೆ ಬರಲು ಒಪ್ಪಿದ್ದೇವೆ. ನಮ್ಮ ಕೊನೆ ಉಸಿರು ಇರುವವರೆಗೂ ಜನಪರ ಹೋರಾಟಕ್ಕೆ ಹಿಂಜರಿಯುವುದಿಲ್ಲ. ಶರಣಾಗತಿ/ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕರ ವೇದಿಕೆಯವರು ಸರಕಾರ ನೀಡಿದ ಎಲ್ಲ ಭರವಸೆಗಳನ್ನು ಅರ್ಥ ಮಾಡಿಸಿದ್ದಾರೆ. ಸರಕಾರ ಕೂಡ
ನಮ್ಮ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ಮುಂಡಗಾರು ಲತಾ ಹೇಳಿದ್ದಾರೆ.
ಶೃಂಗೇರಿ ತಾಲೂಕಿನ ಲತಾ ಮಂಡಗಾರು ಬಡ ಆದಿವಾಸಿ ದಂಪತಿಯ ದೊಡ್ಡ ಕುಟುಂಬದ ಹೆಣ್ಣುಮಗಳು ಬಡತನ ಹಾಗೂ ಶಾಲೆಯ ಮಾಸ್ತರರ ಕಿರುಕುಳಗಳಿಂದಾಗಿ 6 ನೆಯ ತರಗತಿಗೆ ಓದು ನಿಲ್ಲಿಸಿದರು. ಅಂತ್ಯದ ನೂರಾರು ಆದಿವಾಸಿ ಕುಟುಂಬಗಳAತೆಯೇ ಈ ಕುಟುಂಬವು ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಡಿ ಮನೆ ಕಳೆದುಕೊಳ್ಳುವ ಪರಿಸ್ಥಿತಿ ಬಂದಾಗ ಅದರ ವಿರುದ್ಧದ ಹೋರಾಟ ನಡೆಸುತ್ತಿದ್ದ ಚಳುವಳಿಯ ಭಾಗವಾದರು ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಬೆಲೆ ನೀಡದ ಸರ್ಕಾರದ ಧೋರಣೆಗೆ ಬೇಸತ್ತು 2೦೦೦ರಲ್ಲಿ 18ನೇ ವಯಸ್ಸಿನಲ್ಲಿ ಸಶಸ್ತç ಹೋರಾಟಕ್ಕೆ ಧುಮುಕಿ ಅಂದಿನಿAದ ಕರ್ನಾಟಕ ಹಾಗೂ ಕೇರಳಗಳಲ್ಲಿ ಸಂಚರಿಸುವ ದಳದ ಭಾಗವಾಗಿದ್ದು ಇಂದು ಮತ್ತೆ ಜನಪದ ಚಳುವಳಿಗಳಲ್ಲಿ ಪ್ರಜಾತಂತ್ರವಾಗಿ ಹೋರಾಟಗಳನ್ನು ನಡೆಸಲು ಮುಖ್ಯವಾಹಿನಿಯ ಭಾಗವಾಗುತ್ತಿದ್ದಾರೆ. ಕೇವಲ 6 ನೇ ತರಗತಿಯವರೆಗೆ ಓದಿರುವ ಲತಾರವರು ಯೋಜನೆಗಳ ಸ್ಪಷ್ಟತೆ ಹಾಗೂ ಬದ್ಧತೆ ಬೆರಗು ಹುಟ್ಟಿಸುವಂಥದ್ದು. ಈಗಿನ ನಕ್ಸಲ್ ತಂಡದ ನಾಯಕಿ ಎಂದು ಹೇಳಬಹುದು.
ಸುಂದರಿ ಕುತ್ಲೂರು:
ಸುಂದರಿಯೂ ಸಹ ಲತಾ ರೀತಿಯಲ್ಲಿ ಆದಿವಾಸಿ ಮಹಿಳೆ. ಐವರು ಮಕ್ಕಳಲ್ಲಿ ಆರನೆಯವರು ಬಡತನ ಹಾಗೂ ಶಾಲೆ ದೂರವಿದ್ದುದರಿಂದ ಮೂರನೆಯ ತರಗತಿಯ ನಂತರ ಶಾಲೆ ತೊರೆದರು. ಇವರ ಕುಟುಂಬವೂ ಸಹ ಕುದುರೆಮುಖ ರಾಷ್ಟಿçÃಯ ಉದ್ಯಾನ ಯೋಜನೆಯಿಂದಾಗಿ ತನ್ನ ಎಲ್ಲವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿದ್ದರು. ಪ್ರಜಾಸತ್ತಾತ್ಮಕ ಚಳುವಳಿ ಫಲ ನೀಡದೆಂದು ಕಂಡಾಗ ಆಗಿನ ಹಲವರು ಯುವಜನರಂತೆ ಸುAದರಿಯೂ ಸಹ ಆಯುಧವನ್ನು ಕೈಗೆತ್ತಿಕೊಂಡರು. ತನ್ನ 19ನೆಯ ವಯಸ್ಸಿನಲ್ಲಿ 2004ರಲ್ಲಿ ಮಾವೋವಾದಿ ಪಕ್ಷದ ಸದಸ್ಯರಾಗಿದ್ದು ಅಂದಿನಿAದ ಕೇರಳ ಹಾಗೂ ಕರ್ನಾಟಕದಲ್ಲಿ ಸಂಚರಿಸುತ್ತಿರುವ ದಳದ ಭಾಗವಾಗಿದ್ದರು. ತನ್ನ ಹಾಗೂ ನೆರೆಹೊರೆಯ ಕುಟುಂಬಗಳ ಮೇಲೆ ಪೊಲೀಸರು ನಡೆಸುತ್ತಿದ್ದ ದಾಳಿಗಳು ದೌರ್ಜನ್ಯಗಳನ್ನು ಇಂದಿಗೂ ನೋವಿನಿಂದ ನೆನಪಿಸಿಕೊಳ್ಳುವ ಸುಂದರಿ ತನ್ನ ಹೋರಾಟದ ಕೆಚ್ಚನ್ನು ಉಳಿಸಿಕೊಂಡಿದ್ದು ಇನ್ನು ಮುಂದೆ ಪ್ರಜಾತಾಂತ್ರಿಕ ಚಳುವಳಿಗಳ ಭಾಗವಾಗಲು ಮುಖ್ಯ ವಾಹಿನಿಯನ್ನು ಸೇರಬಯಸಿದ್ದಾರೆ.
ವನಜಾಕ್ಷಿ:
ವನಜಾಕ್ಷಿ ಎಸ್ ಎಸ್ ಎಲ್ ಸಿ ವರೆಗೂ ಓದಿರುವ ಇವರು ಈ ತಂಡದ ಅತಿ ಹಿರಿಯ ಸದಸ್ಯ 1985 ರಲ್ಲಿ ಓದು ನಿಲ್ಲಿಸಿದ ಈ ಆದಿವಾಸಿ ಮಹಿಳೆ ತನ್ನ ಗ್ರಾಮದಲ್ಲಿ ಸಾರ್ವಜನಿಕ ಜೀವನದ ಭಾಗವಾಗಿ 1992 ಮತ್ತು 1997 ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಎಂಟು ಜನ ಮಕ್ಕಳ ದೊಡ್ಡ ಕುಟುಂಬದ ಹೆಣ್ಣು ಮಗಳಾಗಿ ಟೈಪ ರೈಟಿಂಗ್ ಕಲಿತು ಹೊಲಿಗೆಯನ್ನು ಕಲಿತು ರಾಜಕೀಯವಾಗಿ ಸಕ್ರಿಯವಾಗಿದ್ದರೂ ಸಹ ಇವರಿಗೆ ಮತ್ತು ಇವರ ಕುಟುಂಬಕ್ಕೆ ಬಲಾಢ್ಯರಿಂದ ತಮ್ಮ ತುಂಡುಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಪರಿಣಾಮವಾಗಿ ತಾಯಿ ಮಾನಸಿಕ ಅಸ್ವಸ್ಥತೆಗೆ ಗುರಿಯಾದರೆ ಒಬ್ಬ ತಮ್ಮ ಆತ್ಮಹತ್ಯೆಗೆ ಶರಣಾದ. ಅಲ್ಲದೆ ಸುತ್ತಮುತ್ತ ಇದ್ದ ಹಲವು ಕುಟುಂಬಗಳು ಸಹ ತಮ್ಮಂತೆ ಬಡತನ
ಶೋಷಣೆಗಳಿಗೆ ಬಲಿಯಾಗುತ್ತಿದ್ದುದ್ದನ್ನು ಕಂಡ ವನಜಾಕ್ಷಿ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡರು ಸಶಸ್ತç ಹೋರಾಟವೇ ದಾರಿ ಎಂಬ ನಿರ್ಧಾರಕ್ಕೂ ಆ ಕಾಲದಲ್ಲಿ ನಡೆಯುತ್ತಿದ್ದ ಸಶಸ್ತç ಚಳುವಳಿಯ ಪ್ರಭಾವದಿಂದಾಗಿ ಬAದರು 2000 ನೇ ಇಸವಿಯಿಂದ ಮಾವೋವಾದಿ ಪಕ್ಷದ ಭಾಗವಾಗಿ ಕರ್ನಾಟಕ ಹಾಗೂ ಕೇರಳದಲ್ಲಿ ಸಂಚರಿಸುವ ದಳದ ಸದಸ್ಯೆಯಾಗಿದ್ದರು. ತನ್ನ ಹೋರಾಟವನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿಯೂ ಮುಂದುವರಿಸಬಹುದಾದ ಅವಕಾಶಗಳನ್ನು ಅರ್ಥ ಮಾಡಿಕೊಂಡು ಈಗ ಮುಖ್ಯವಾಹಿನಿಯ ಭಾಗವಾಗಲು ಸಿದ್ಧರಾಗಿದ್ದಾರೆ.
ಜಯಣ್ಣ ಅರೋಲಿ:
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಜಯಣ್ಣ ಆರೋಲಿ ಎರಡನೆಯ ಬಿಎ ವರೆಗೂ ಓದಿರುವ ದಲಿತ ಯುವಕ ಕಾಲೇಜಿನಲ್ಲಿ ಇರುವಾಗಲೇ ಆ ಸಮಯದಲ್ಲಿ ಆ ಭಾಗದಲ್ಲಿ ನಡೆಯುತ್ತಿದ್ದ ಮಾವೋವಾದಿ ಚಳುವಳಿಯ ಕಡೆ ಆಕರ್ಷಿತರಾದರು ಆಸಕ್ತಿಯಿಂದ ಚಳುವಳಿಯನ್ನು ಗಮನಿಸುತ್ತಿದ್ದ ಅವರಿಗೆ ಭಾಸ್ಕರ್ ಅವರ ಎನ್ಕೌಂಟರ್ ಹತ್ಯೆ ಆಘಾತವನ್ನುಂಟು ಮಾಡಿತು 2೦೦೦ನೆ ಇಸವಿಯಲ್ಲಿ ತನ್ನ 24ನೇ ವಯಸ್ಸಿನಲ್ಲಿ ದಳದ ಭಾಗವಾದರು ಅಂದಿನಿAದ ಕೇರಳ ಕರ್ನಾಟಕಗಳಲ್ಲಿ ಇವರ ಹೋರಾಟದ ಚಟುವಟಿಕೆಗಳು
ನಡೆದಿದೆ ೨೦೧೮ ಮತ್ತೆ ಸಶಸ್ತç ಚಳುವಳಿಗೆ ಮರಳಿದರು ಜನರ ಜೊತೆ ಸೇರಿ ಜನಪರ ಹೋರಾಟಗಳನ್ನು ನಡೆಸಲು ಮುಖ್ಯ ವಾಹಿನಿಯ ಭಾಗವಾಗಿ ಭಾಗವಾಗ ಬಯಸಿದ್ದಾರೆ ಸರ್ಕಾರ ಪ್ರಕಟಿಸಿರುವ ಪ್ಯಾಕೇಜ್ ಭಾಗವಾಗಿ ತಮಗೆ ಸಂದಾಯವಾಗಬಹುದಾದ ಹಣದ ಅರ್ಧ ಭಾಗವನ್ನು ತನ್ನ ಹಳ್ಳಿಯ ಶಾಲೆಯ ಅಭಿವೃದ್ಧಿಗಾಗಿ ನೀಡಬೇಕೆಂದು ತೀರ್ಮಾನಿಸಿದ್ದಾರೆ.
ವಸಂತ್ ಆರ್ಕಾಟ್:
ತಮಿಳುನಾಡಿನ ವೆಲ್ಲೂರಿನ ವಸಂತ್ ಬಿ ಟೆಕ್ ಪದವೀಧರ ವೆಲ್ಲೂರು ಜಿಲ್ಲೆಯ ಆರ್ಕಾಟ್ ಅವರ ಊರು ಸಮಾಜಮುಖಿ ಚಿಂತನೆಗಳಿAದ ಪ್ರಭಾವಿತರಾದ ಇವರು ಹೋರಾಟಗಳನ್ನು ಗಮನಿಸುತ್ತಿ ಬೆಳೆದವರು 2೦1೦ರಲ್ಲಿ ಪದವಿ ಮುಗಿಸಿದ ತಕ್ಷಣವೇ ಶಶಸ್ತç ಹೋರಾಟದ ಭಾಗವಾಗಿ ಅಂದಿನಿAದಲೂ ಕೇರಳ ಕರ್ನಾಟಕಗಳಲ್ಲಿರುವ ದಳದ ಸದಸ್ಯರಾಗಿದ್ದರು. ಮಿತ ಭಾಷೆಯಾಗಿರುವ ವಸಂತ್ ತನ್ನ ಆದರ್ಶಗಳನ್ನು ಬಿಟ್ಟುಕೊಡದೆ ಹೋರಾಟದ ಮಾರ್ಗವನ್ನು ಬದಲಿಸಿ ಮುಖ್ಯವಾಹಿನಿಯನ್ನು ಸೇರಬಯಸಿದ್ದಾರೆ.
ಜಿಶ ಎಲ್ಲರಿಗಿಂತ ಕಿರಿಯ:
ಜಿಶ ತಂಡದಲ್ಲಿನ ಎಲ್ಲರಿಗಿಂತಲೂ ತುAಬಾ ಚಿಕ್ಕವರು. ಕೇರಳದ ಜೀಶ ವಯನಾಡ್ ಜಿಲ್ಲೆಯ ಮಕ್ಕಿಮಲದ ಆದಿವಾಸಿ ಮಹಿಳೆ ಎಂಟನೇ ತರಗತಿಯವರೆಗೂ ವಿದ್ಯಾಭ್ಯಾಸ 2018 ರಲ್ಲಿ ಕೇರಳದಲ್ಲಿ ಸಶಸ್ತç ಹೋರಾಟದ ಭಾಗವಾಗಿದ್ದು ೨೦೨೩ರಲ್ಲಿ ತಂಡದ ಇತರೆ ಸದಸ್ಯರೊಂದಿಗೆ ಕೇರಳದಿಂದ ಕರ್ನಾಟಕಕ್ಕೆ ಬಂದವರು.


