ಬೆಂಗಳೂರು : ಮುಡಾ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಆರ್ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿಸಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪ ಅನ್ನು ಇವತ್ತಿಗೆ ಕಾಯ್ದಿರಿಸಿತ್ತು. ಅದರಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯರ ಅರ್ಜಿಯನ್ನು ವಜಾ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ಹಾಜರಾಗುವಂತೆ ರಾಜ್ಯಪಾಲರು ನೋಟೀಸ್ ನೀಡದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮುಡಾ ಹಗರಣದ ಅರ್ಜಿ ವಿಚಾರಣೆಯನ್ನೂ ಕೈಗೆತ್ತಿಕೊಂಡಿತ್ತು. ಆದರೆ, ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳ ಹಂತದ ಯಾವುದೇ ನ್ಯಾಯಾಲಯಗಳು (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‌ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‌ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಇದೀಗ ಸಿಎಂ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಮದುವರೆಯಲಿದೆ.ಸದ್ಯ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರರಕಣದ ಬಗ್ಗೆ ತನಿಖೆಯಾಗಬೇಕು ಎಂದು ಕೋರ್ಟ್ ಹೇಳಿದ್ದರಿಂದ ಸಿಎಂಗೆ ಇನ್ನಷ್ಟು ಸಂಕಷ್ಟ ಹೆಚ್ಚಾದಂತಾಗಿದೆ.
ಹೈಕೋರ್ಟ್‌ನ ಈ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವುದರಿಂದ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಆದೇಶದ ಪ್ರತಿ ಪಡೆಯಬೇಕು. ಅದನ್ನ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಇಂದೇ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ಕೋರುವ ಸಾಧ್ಯತೆ ಇದೆ.
ಹೈಕೋರ್ಟ್‌ನ ಈ ತೀರ್ಪು ನಿರೀಕ್ಷೆ ಮಾಡಿದ್ದ ಸಿಎಂ ಸಿದ್ದರಾಮಯ್ಯನವರು ಮುಂದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಎಲ್ಲವನ್ನೂ ಎದುರಿಸೋದಕ್ಕೆ ತಯಾರಾಗಿರುವ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್ ನೀಡಿದ್ದನ್ನು ಪ್ರಶ್ನಿಸಿ ಮುಂದಿನ ಹೋರಾಟ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೂ ಈಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲೂ ಸಿದ್ಧವಾಗಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧವೂ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡಿದ್ದಾರೆ.


