Wednesday, September 17, 2025
Flats for sale
Homeಸಿನಿಮಾಬೆಂಗಳೂರು : ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ ಏಕರೂಪ ಸಿನಿಮಾ ಟಿಕೆಟ್ ದರ ನಿಗದಿ..!

ಬೆಂಗಳೂರು : ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ ಏಕರೂಪ ಸಿನಿಮಾ ಟಿಕೆಟ್ ದರ ನಿಗದಿ..!

ಬೆಂಗಳೂರು : ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ನಡೆಯುತ್ತಿದ್ದ ಲೂಟಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ನೀಡಿದೆ.

ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷೆಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್ ದರ 2೦೦ ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 2೦೦ ರೂ.ಗಳ ಗರಿಷ್ಠ ಟಿಕೆಟ್ ದರ ಮಿತಿಯಿಂದ ಹೊರಗಿಟ್ಟಿದೆ.

ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊAದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್, ಆಂಧ್ರಪ್ರದೇಶದಲ್ಲಿ ಗರಿಷ್ಠ150 ರೂ. ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು ನೇತೃತ್ವದಲ್ಲಿ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ನಲ್ಲಿ ಎರಡು ಕನ್ನಡ ಸಿನಿಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ಹಿನ್ನೆಲೆ ಏಕರೂಪ ದರ ನಿಗಡಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular