ಬೆಂಗಳೂರು ; ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಬೇಡಿಕೆಯನ್ನಿಟ್ಟಿತ್ತು. ಏರಿಕೆಯ ಅಂತಿಮ ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳದಲ್ಲಿತ್ತು ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ ಏರಿಕೆಗೆ ಅನುಮೋದನೆ ದೊರಕಿದೆ.
ರಾಜ್ಯ ಸರಕಾರ ಅಧಿಕಾರಕ್ಕೆರಲು ನೀಡಿದ ಭಾಗ್ಯಗಳಿಂದ ಹಣಹೊಂದಿಸಲು ಹರಸಾಹಸ ಪಡುತ್ತಿರುವುದು ಎಲ್ಲಾರಿಗೂ ತಿಳಿದ ವಿಚಾರ ಈಗಾಗಲೇ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಮತ್ತು ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಜಜನರಿಗೆ ಗಾಯದ ಮೇಲೆ ಬರೆ ಎಳೆದಿದೆ.ಒಟ್ಟಿನಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮನ್ಯರಿಗೆ ದಿಗೀಲುಡಿದಂತಾಗಿದೆ.


