ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮದ್ಯಾಹ್ನ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಘಟನೆಯಲ್ಲಿ ಗಾಯಗೊಂಡ 9 ಜನರಿಗೂ ಚಿಕಿತ್ಸೆ ನೀಡಲಾಗುತ್ತಿದೆ,ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


