Friday, March 13, 2026
Flats for sale
Homeದೇಶಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ...

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ನಡೆದು ಇನ್ನೇನು ಹಲವು ದಿನಗಳೇ ಕಳೆದಿವೆ ಆದರೆ ಪೊಲೀಸರು ಹಲವು ಸಂಕಿತರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು ಆದರೆ ಇದೀಗ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ NIA ಆರೋಪಿ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದೆ.

ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ವೇಳೆ ಆರೋಪಿಯ ಮಾಸ್ಕ್ ಹಾಕದ ಫೋಟೋ ಬಿಡುಗಡೆಮಾಡಿದ್ದು ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್​ ಫೋಟೋ ಹಂಚಿಕೊಂಡಿರುವ ಎನ್​ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular