ಬೆಂಗಳೂರು : ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ದೌರ್ಜನ್ಯದ ಸುಳಿಯಲ್ಲಿ ಸಿಲುಕಿದ್ದು, ಮಹಿಳೆಯೊಬ್ಬಳ ಜತೆಗಿನ ಪರಿಚಯ ದುರುಪಯೋಗಪಡಿಸಿಕೊಂಡು ದೈಹಿಕವಾಗಿ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಸ್ವತಃ ಸಂತ್ರಸ್ತ ಮಹಿಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ದೂರು ನೀಡಿ, ನ್ಯಾಯ ಕೊಡುವಂತೆ ಆಗ್ರಹಿಸಿದ್ದಾಳೆ.
ಇದೀಗ ಮಹಿಳೆ ಮತ್ತು ಸ್ವಾಮೀಜಿ ನೀಡಿರುವ ದೂರು- ಪ್ರತಿದೂರಿನಲ್ಲಿ ಈ ಘಟನೆ ನಡೆದಿರುವುದು ದೃಢಪಟ್ಟಿದೆ. ಸ್ವಾಮೀಜಿಯಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎನ್ನಲಾದ ಮಹಿಳೆಯು ಏಪ್ರಿಲ್ 6 ರಂದು ಸೋಮವಾರ ರಾಜ್ಯ ಮಹಿಳಾ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗ,
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕೆಲವು ದಾಖಲೆಗಳ ಸಹಿತ ಸ್ವಾಮೀಜಿ ದೌರ್ಜನ್ಯದ ವಿರುದ್ಧ ದೂರು ನೀಡಿದ್ದಾಳೆ. ದೂರಿನ ಜತೆಗೆ ಕಾಲ್ ರೆಕಾರ್ಡಿಂಗ್ ವಿವರ, ಕಾಲ್ ಲಾಗ್ ವಿವರ, ವಾಟ್ಸಪ್ ಸಂದೇಶಗಳು ಹಾಗೂ ಬೆದರಿಕೆ ಒಡ್ಡಿದ ಸಂಬAಧದ ದಾಖಲೆಗಳನ್ನು ಕೂಡ ಸಲ್ಲಿಸಿದ್ದಾಳೆ. ಮಹಿಳೆಯ ದೂರು ಆಧರಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಕರಣದ ಕುರಿತಂತೆ ವರದಿ ನೀಡಲು ಜಯನಗರ ಎಸಿಪಿ ಹಾಗೂ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾರೆ.
ಸಂತ್ರಸ್ತೆಯ ದೂರಿನಲ್ಲಿ ಏನಿದೆ?: “ನಾನು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ `ಪ್ರಸಾದ ಕೊಡುತ್ತೇನೆ’ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು,
ಪ್ರತಿ ರಾತ್ರಿ ಫೋನ್ ಮಾಡಿ “ಬೆತ್ತಲೆ ವಿಡಿಯೋ ಕಾಲ್ ಮಾಡು,ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ” ಎಂದು ಬೆದರಿಸುತ್ತಿದ್ದಾರೆ. ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿAದ, ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ,” ಎಂದು ಮನವಿ ಮಾಡಿದ್ದಾಳೆ.


