ಬೆಂಗಳೂರು ; ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವುದರಿಂದ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಎಲ್ಲಾ ಪಕ್ಷಗಳು ಟಿಕೆಟ್ ಫೈನಲ್ ಮಾಡುತ್ತಿದೆ.ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ ನಿರಂತರವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 40 ರಿಂದ 60 ಜನರ ಹೆಸರು ಘೋಷಣೆ ಆಗಲಿದೆ. ಕರ್ನಾಟಕದ ಜೊತೆಗೆ ಕೇರಳ, ದೆಹಲಿ, ತೆಲಂಗಾಣ, ಛತ್ತಿಸ್‌ಗಢ ಮತ್ತು ಲಕ್ಷದ್ವೀಪದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಫೈನಲ್ ಆಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಕರ್ನಾಟಕ, ಕೇರಳ, ಚತ್ತೀಸಘಡ, ತೆಲಂಗಾಣ, ಮೆಘಾಲಯ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂನ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಹುಲ್ ಗಾಂಧಿ ಕೇರಳದ ವಯಾನಾಡಿನಿಂದ ಈ ಬಾರಿಯೂ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ತಿರುವನಂತಪುರಂ ಕ್ಷೇತ್ರದಿಂದ ಶಶಿ ತರೂರ್‌ಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ 6 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್‌ಗೆ ಟಿಕೆಟ ಫೈನಲ್ ನೀಡಲಾಗಿದೆ. ಮಂಡ್ಯದಿಂದ ವೆಂಕಟರಮಣೇಗೌಡಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಕ್ಕೆ ಟಿಕೆಟ್ ಫೈನಲ್
- ವಿಜಯಪುರ – ರಾಜು ಆಲಗೂರು – ಎಸ್.ಸಿ
- ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
- ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ
- ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
- ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
- ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
ಕರ್ನಾಟಕ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ತಡೆ ಹಿಡಿಯಲಾಗಿದೆ.
- ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ – ಬಂಟ್ಸ್
- ಚಿತ್ರದುರ್ಗ – ಬಿ.ಎನ್ ಚಂದ್ರಪ್ಪ – ಎಸ್.ಸಿ
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ವಯನಾಡ್ (ಕೇರಳ): ರಾಹುಲ್ ಗಾಂಧಿ
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್


