Thursday, July 23, 2026
Homeರಾಜ್ಯಬೆಂಗಳೂರು : ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್ ಸೆರೆ.

ಬೆಂಗಳೂರು : ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್ ಸೆರೆ.

ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್ ಆಗಿದ್ದು,ಆತನನ್ನು ಹೆಚ್ಚಿನ ವಿಚಾರಣೆಗೆ
ಗುರಿಪಡಿಸಲಾಗಿದೆ.ವಿಕಾಸ ಗೌಡ ರನ್ ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ’’ ಎಂದು ಹೇಳಿದ್ದನು.

ಈ ವಿಡಿಯೋವನ್ನು ನೋಡಿದ ಸಿಐಎಸ್‌ಎಫ್ ಅಧಿಕಾರಿಗಳು ಆತನ ವಿರುದ್ಧ ದೂರು ದಾಖಲಿಸಿದ್ದು,ಪ್ರಕರಣ ದಾಖಲಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್‌ಗೌಡನನ್ನು ಬಂಧಿಸಿದ್ದಾರೆ.

ಬಂಧಿತ ಪೊಲೀಸರು ವಿಚಾರಣೆ ನಡೆಸಿದಾಗ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular