ಬೆಂಗಳೂರು : ರಾಜಧಾನಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇನ್ನು ಮುಂದೆ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.
ರಾತ್ರಿ 1 ಗಂಟೆಯ ವರೆಗೆ ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.


