Saturday, March 14, 2026
Flats for sale
Homeರಾಜಕೀಯಬೆಂಗಳೂರು : ಶಾಸಕರಿಗೆ ಕರೆ ಮಾಡಿ ಆಫರ್, ಧಮ್ಕಿ ನೀಡುತ್ತಿದ್ದಾರೆ ಎಚ್‌ಡಿಕೆ : ಡಿಕೆ ಶಿವಕುಮಾರ್.

ಬೆಂಗಳೂರು : ಶಾಸಕರಿಗೆ ಕರೆ ಮಾಡಿ ಆಫರ್, ಧಮ್ಕಿ ನೀಡುತ್ತಿದ್ದಾರೆ ಎಚ್‌ಡಿಕೆ : ಡಿಕೆ ಶಿವಕುಮಾರ್.

ಬೆಂಗಳೂರು :”ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಉಪಮುಖ್ಯಮಂತ್ರಿ ಡಿಕೆಶಿ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದು ಪ್ರಶ್ನೆ ವಿವಾದಕ್ಕೂ ಉತ್ತರಿಸಿದರು.

ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುವುದಾಗಿ” ಎಂದು ತಿಳಿಸಿದರು.

ಬಿಜೆಪಿ ಸೇರಲ್ಲ ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ ಹೆಸರಿಗೆ ಮಸಿ
ಬಳಿಯುವ ಕೆಲಸ ಮಾಡುತ್ತಿದ್ದಾರೆ.

ಕಳೆದ 25 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ತಿ ವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾAಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ತಾವು ಸೇರಿದಂತೆ ಎಲ್ಲರೂ ಪಾಲಿಸಬೇಕು. ಮುಖಂಡರೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular