Thursday, May 28, 2026
Flats for sale
Homeರಾಜ್ಯಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ,ರಾಜಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಕೆ.

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ,ರಾಜಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಕೆ.

ಬೆಂಗಳೂರು ; ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆ ಹಾಗೂ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆದ ಸಚಿವ ಸಂಪುಟದ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಸಚಿವರಿಗೆ ತಿಳಿಸಿದ್ದು, ಸಭೆಯಲ್ಲಿ ಭಾವನಾತ್ಮಕ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ. ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಸಿದ್ದರಾಮಯ್ಯ ಅವರೊಂದಿಗೆ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದರು.

ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಶಾಸಕರೊಂದಿಗೆ ಸಮಾಲೋಚನೆಗಳು ನಡೆದಿದ್ದು, ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.

ಈ ಬೆಳವಣಿಗೆಯೊಂದಿಗೆ ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ರಾಜ್ಯದ ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular