Wednesday, November 5, 2025
Flats for sale
Homeದೇಶಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ : ನಗರತ್ ಪೇಟೆಯಲ್ಲಿ ಪರಿಸ್ಥಿತಿ ಉದ್ವಿಗ್ನ,ತೇಜಸ್ವಿ...

ಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ : ನಗರತ್ ಪೇಟೆಯಲ್ಲಿ ಪರಿಸ್ಥಿತಿ ಉದ್ವಿಗ್ನ,ತೇಜಸ್ವಿ ಸೂರ್ಯ,ಶೋಭಾ ಕರಂದ್ಲಾಜೆ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ಪೊಲೀಸ್ ವಶಕ್ಕೆ.

ಬೆಂಗಳೂರು : ಆಜಾನ್ ವೇಳೆ ಹನುಮಾನ್‌ ಚಾಲೀಸ ಹಾಕಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ ಘಟನೆ ಇದೀಗ ತಾರಕಕ್ಕೆ ಏರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ 5 ಜನರನ್ನು ಬಂಧಿಸಿದ್ದರು. ಈ ಬಗ್ಗೆ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಶಾಂತಿ ಮೆರವಣಿಗೆ ಹಮ್ಮಿಕೊಂಡಿದ್ದರು. ಮೆರವಣಿಗೆಯಲ್ಲಿ ಕೇಸರಿ ಬಾವುಟ, ಭಗವದ್ವಾಜ ನಗರತ್ ಪೇಟೆಯಲ್ಲಿ ರಾರಾಜಿಸಿದೆ.

ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ನೂರಾರು ಹಿಂದೂ ಕಾರ್ಯಕರ್ತರು ಆಗಮಿಸಿದ್ದರು. ಮೆರವಣಿಗೆಯಲ್ಲಿ ಭಾಗಿಯಾದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಗಲ್ಲಿ ಗಲ್ಲಿಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ‌ಜನರನ್ನು ಚದುರಿಸಲು‌ ಪೊಲೀಸರ ಹರಸಾಹಸ ಪಟ್ಟರು. ಮೆರವಣಿಗೆ ನಿಲ್ಲಿಸುವಂತೆ ಪೊಲೀಸರು ಕರೆ ಕೊಟ್ಟರು ಕ್ಯಾರೇ ಎನ್ನದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಹಲ್ಲೆಗೊಳಗಾದ ಮುಖೇಶ್​ನನ್ನು ಪೊಲೀಸರು ಜೀಪ್​ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ವಾಹನದ ಮುಂದೆ ನಿಂತು ಶಾಸಕ ಸುರೇಶ್​ಕುಮಾರ್ ಪ್ರತಿಭಟನೆ ನಡೆಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಶಾಸಕ ಸುರೇಶ್​ಕುಮಾರ್ ಮತ್ತು​ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯುವಾಗ ಪೊಲೀಸ್ ಜೀಪ್ ಅಡ್ಡ ನಿಂತು ಘೋಷಣೆ ಕೂಗಿದರು. ಕೆಲ ಕಾಲ ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದ್ದು ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.ನೀತಿ ಸಂಹಿತೆ ಜಾರಿಯಾಗಿದೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದರು. ಇದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಹಿಂದೂ ಕಾರ್ಯಕರ್ತರು ಮುಖೇಶ್​​ನನ್ನು ಪೊಲೀಸ್ ವಾಹನದಿಂದ ಕೆಳಗೆ ಇಳಿಸಿಕೊಂಡರು.

ಪೊಲೀಸರು, ತೇಜಸ್ವಿ ಸೂರ್ಯ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular